ಖೇಲ್ ರತ್ನಕ್ಕೆ ಸಾನಿಯಾ ಮಿರ್ಜಾ ಹೆಸರು ಶಿಫಾರಸ್ಸು

ವಿಂಬಲ್ಡನ್ ಡಬಲ್ಸ್ ಚಾಂಪಿಯನ್ ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಹೆರಸನ್ನು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಕ್ರೀಡಾ ಸಚಿವಾಲಯ ಹೇಳಿದೆ....
ಸಾನಿಯಾ ಮಿರ್ಜಾ
ಸಾನಿಯಾ ಮಿರ್ಜಾ
Updated on: 

ನವದೆಹಲಿ: ವಿಂಬಲ್ಡನ್ ಡಬಲ್ಸ್ ಚಾಂಪಿಯನ್ ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಹೆಸರನ್ನು ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಲಾಗಿದೆ ಎಂದು ಕ್ರೀಡಾ ಸಚಿವಾಲಯ ಹೇಳಿದೆ.

ಸ್ವಿಸ್ ನ ಮಾರ್ಟಿನಾ ಹಂಗೀಸ್ ಜತೆಗೂಡಿ ಸಾನಿಯಾ ಮಿರ್ಜಾ ವಿಂಬಲ್ಡನ್ ಮಹಿಳಾ ಡಬಲ್ಸ್ ನಲ್ಲಿ ಪ್ರಪ್ರಥಮ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿದ್ದು, ಕ್ರೀಡಾ ಸ್ಪರ್ಧಿಗಳಿಗೆ ನೀಡಲಾಗುವ ಅತ್ಯುನ್ನತ ಖೇಲ್ ರತ್ನ ಪ್ರಶಸ್ತಿಗೆ ಸಾನಿಯಾ ಮಿರ್ಜಾ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿದ್ದು, ಅಂತಿಮ ನಿರ್ಧಾರ ಪ್ರಶಸ್ತಿ ಸಮಿತಿ ಕೈಗೊಳ್ಳಲಿದೆ ಎಂದು ಕ್ರೀಡಾ ಕಾರ್ಯದರ್ಶಿ ಅಜಿತ್ ಶರ್ಮಾ ಹೇಳಿದ್ದಾರೆ.

ಅಖಿಲ ಭಾರತ ಟೆನ್ನಿಸ್ ಅಸೋಸಿಯೇಷನ್ ನಿಂದ ಖೇಲ್ ರತ್ನ ಪ್ರಶಸ್ತಿಗೆ ಸಾನಿಯಾ ಮಿರ್ಜಾ ಹೆಸರು ಶಿಫಾರಸ್ಸು ತಡವಾಗಿ ಬಂದಿದೆ. ಆದರೂ ಈ ಶಿಫಾರಸ್ಸನ್ನು ನಾವು ಅಂಗೀಕರಿಸಿದ್ದು ಪ್ರಶಸ್ತಿ ಸಮಿತಿ ಅಂತಿಮ ನಿರ್ಧಾರಕೈಗೊಳ್ಳಲಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com