ಇಂಡೊನೇಷ್ಯಾ ಓಪನ್: ವಿಶ್ವದ ನಂ.1 ಆಟಗಾರ ಲಾಂಗ್ ವಿರುದ್ಧ ಕಶ್ಯಪ್‌ ಗೆಲುವು

ಇಂಡೊನೇಷ್ಯಾ ಓಪನ್ ಸೂಪರ್ ಸಿರೀಸ್ ಪ್ರೀಮಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತದ 2014ರ ಕಾಮನ್ವೆಲ್ತ್ ಗೇಮ್ಸ್...
ಕಶ್ಯಪ್‌
ಕಶ್ಯಪ್‌

ಜಕಾರ್ತ್: ಇಂಡೊನೇಷ್ಯಾ ಓಪನ್ ಸೂಪರ್ ಸಿರೀಸ್ ಪ್ರೀಮಿಯರ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಕ್ವಾರ್ಟರ್‌ಫೈನಲ್‌ನಲ್ಲಿ ಭಾರತದ 2014ರ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಪರುಪಳ್ಳಿ ಕಶ್ಯಪ್ ಅವರು ವಿಶ್ವದ ನಂ.1 ಆಟಗಾರ ಚೀನಾದ ಚೆನ್ ಲಾಂಗ್ ವಿರುದ್ಧ ಭರ್ಜರಿ ಜಯ ಗಳಿಸಿದ್ದಾರೆ.

ಇಂದು ನಡೆದ ಪುರುಷರ ಸಿಂಗಲ್ಸ್ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಕಶ್ಯಪ್ ಅವರು ಲಾಂಗ್ ವಿರುದ್ಧ 14-12, 21-17, 21-14 ನೇರ ಗೇಮ್‌ಗಳಿಂದ ಜಯ ಗಳಿಸುವ ಮೂಲಕ ಸೆಮಿ ಫೈನಲ್ ಪ್ರವೇಶಿಸಿದ್ದಾರೆ.

ವಿಶ್ವದ 12ನೇ ಶ್ರೇಯಾಂಕಿತ ಭಾರತೀಯ ಆಟಗಾರ ಕಶ್ಯಪ್ ಅವರು ವಿಶ್ವದ ನಂ.1 ಶ್ರೇಯಾಂಕಿತ ಲಾಂಗ್ ವಿರುದ್ಧ ಗೆಲುವು ಸಾಧಿಸುವ ಮೂಲಕ ಅಚ್ಚರಿಯ ಫಲಿತಾಂಶ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com