ಭಾರತದ ಎ ತಂಡ ಹಾಗೂ ಅಂಡರ್ 19 ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್

ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿ ಅವರು ಬಿಸಿಸಿಐ ಸಲಹಾ ಸಮಿತಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ರಾಹುಲ್...
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್

ನವದೆಹಲಿ: ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ಸೌರವ್ ಗಂಗೂಲಿ ಅವರು ಬಿಸಿಸಿಐ ಸಲಹಾ ಸಮಿತಿಗೆ ಸೇರ್ಪಡೆಗೊಂಡ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರೂ ಬಿಸಿಸಿಐನಲ್ಲಿ ಪ್ರಮುಖ ಪಾತ್ರವಹಿಸಲಿದ್ದಾರೆ ಎಂಬ ನಿರೀಕ್ಷೆ ಈಗ ನಿಜವಾಗಿದೆ.

ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಭಾರತದ ಎ ತಂಡಕ್ಕೆ ಹಾಗೂ 19 ವರ್ಷದೊಳಗಿನ ತಂಡದ ಕೋಚ್ ಆಗಲು ಒಪ್ಪಿಕೊಂಡಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ತಿಳಿಸಿದೆ.

ಈ ಸಂಬಂಧ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು, ಕೋಲ್ಕತಾದಲ್ಲಿ ನಡೆದ ಸಲಹಾ ಸಮಿತಿಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಭಾರತ ತಂಡಕ್ಕೆ ಹಿರಿಯ ಆಟಗಾರರ ಸಲಹೆ ಹಾಗೂ ಸೂಚನೆ ಪಡೆದು ಟೀಂ ಇಂಡಿಯಾಗೂ ಕೋಚ್ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com