3ನೇ ಬಾರಿ ಫ್ರೆಂಚ್ ಪ್ರಶಸ್ತಿ ಗೆದ್ದ ಸೆರೆನಾಗೆ 20ನೇ ಗ್ರ್ಯಾನ್ ಸ್ಲಾಮ್ ಗರಿ
ಪ್ಯಾರಿಸ್: ತಮ್ಮ ಅಕ್ರಮಣಕಾರಿ ಆಟದಿಂದ ಎದುರಾಳಿ ಆಟಗಾರ್ತಿ ವಿರುದ್ಧ ಪ್ರಾಬಲ್ಯ ಮೆರೆದ ವಿಶ್ವದ ನಂಬರ್ ಒನ್ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಅವರು ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಎತ್ತಿ ಹಿಡಿಯುವ ಮೂಲಕ, ತಮ್ಮ ವೃತ್ತಿ ಜೀವನದ 20ನೇ ಗ್ರ್ಯಾನ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.
ಶನಿವಾರ ನಡೆದ ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್ಸ್ ಪಂದ್ಯದಲ್ಲಿ ಅಮೆರಿಕದ ಸೆರೆನಾ ವಿಲಿಯಮ್ಸ್, ತಮ್ಮ ಎದುರಾಳಿ ಜೆಕ್ ಗಣರಾಜ್ಯದ ಲೂಸಿ ಸಫಾರೋವಾ ವಿರುದ್ಧ 6-3. 6-7(2/7), 6-2 ಸೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮೂರನೇ ಬಾರಿಗೆ ಫ್ರೆಂಚ್ ಓಪನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇದರೊಂದಿಗೆ ಟೆನಿಸ್ ಮುಕ್ತ ಯುಗದಲ್ಲಿ ಅತಿ ಹೆಚ್ಚು ಗ್ರ್ಯಾನ್ ಸ್ಲಾಮ್ ಗೆದ್ದ ಮಹಿಳಾ ಆಟಗಾರ್ತಿಯಾಗಿದ್ದಾರೆ.
ಇದೇ ಮೊದಲ ಬಾರಿಗೆ ಗ್ರ್ಯಾನ್ ಸ್ಲಾಮ್ ಟೂರ್ನಿಯ ಫೈನಲ್ ಪ್ರವೇಶಿಸಿದ್ದ ಲೂಸಿ ಸಫಾರೋವಾ, ಸೆರೆನಾ ವಿಲಿಯಮ್ಸ್ ವಿರುದ್ಧ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿದ್ದಾರೆ. ಇದುವರೆಗೂ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಗೆಲ್ಲದ ಸಫಾರೋವಾ ವಿರುದ್ಧ 19 ಬಾರಿ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಗೆದ್ದಿದ್ದ ಸೆರೆನಾ ವಿಲಿಯಮ್ಸ್ ಗೆಲುವಿನ ಫೇವರಿಟ್ ಆಗಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ