ಸ್ಪಾಟ್ ಫಿಕ್ಸಿಂಗ್ನಲ್ಲಿ ಭಾಗಿಯಾಗಿದ್ದು ನಿಜ, ತಪ್ಪೊಪ್ಪಿಕೊಂಡ ಪಾಕ್ ಕ್ರಿಕೆಟಿಗ ಸಲ್ಮಾನ್ ಬಟ್

ಇಂಗ್ಲೆಂಡ್ ವಿರುದ್ಧದ ಪಂದ್ಯವೊಂದರಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಸಲ್ಮಾನ್ ಬಟ್ ಕೊನೆಗೂ ತಪ್ಪೊಪ್ಪಿಕೊಂಡಿದ್ದಾರೆ...
ಸಲ್ಮಾನ್ ಬಟ್
ಸಲ್ಮಾನ್ ಬಟ್

ಲಾಹೋರ್: ಇಂಗ್ಲೆಂಡ್ ವಿರುದ್ಧದ ಪಂದ್ಯವೊಂದರಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಸಲ್ಮಾನ್ ಬಟ್ ಕೊನೆಗೂ ತಪ್ಪೊಪ್ಪಿಕೊಂಡಿದ್ದಾರೆ.

ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ 5 ವರ್ಷ ನಿಷೇಧಕ್ಕೆ ಗುರಿಯಾಗಿರುವ ಸಲ್ಮಾನ್ ಬಟ್ ತಪ್ಪೊಪ್ಪಿಕೊಂಡಿರುವುದಾಗಿ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ಯಾರ್ ಖಾನ್ ತಿಳಿಸಿದ್ದಾರೆ.

ಆಗಸ್ಟ್ 201ರಲ್ಲಿ ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್ ಪಂದ್ಯದ ವೇಳೆ ಉದ್ದೇಶಪೂರ್ವಕವಾಗಿ ನೋ ಬಾಲ್ ಹಾಕಲು ಸ್ಪಾಟ್ ಫಿಕ್ಸಿಂಗ್ ಮಾಡಿಕೊಳ್ಳಲಾಗಿತ್ತು. ಬಳಿಕ ವಿಚಾರಣೆ ನಡೆದು ಬಟ್ ತಪ್ಪಿತಸ್ಥನೆಂದು ಸಾಬೀತಾಗಿತ್ತು.

ಸ್ಪಾಟ್ ಫಿಕ್ಸಿಂಗ್ ತಾವಾಗೆ ತಪ್ಪೊಪ್ಪಿಕೊಂಡಿಲ್ಲ ತಪ್ಪೊಪ್ಪಿಗೆ ಹೇಳಿಕೆಗೆ ಸಹಿ ಮಾಡುವಂತೆ ಕೇಳಿದ್ದೆವು ಅದಕ್ಕೆ ಸಲ್ಮಾನ್ ಬಟ್ ಸಹಿ ಹಾಕಿದ್ದಾರೆ ಎಂದು ಖಾನ್ ತಿಳಿಸಿದ್ದಾರೆ. ಸದ್ಯ ಐಸಿಸಿ ಭ್ರಷ್ಟಾಚಾರ ವಿರೋಧಿ ಪಡೆಗೆ ಸಲ್ಮಾನ್ ಬಟ್ ಹೇಳಿಕೆ ಪತ್ರವನ್ನು ರವಾನಿಸಲಾಗಿದೆ. ಸೆಪ್ಟೆಂಬರ್ ಗೆ ಬಟ್ ನಿಷೇಧದ ಅವಧಿ ಮುಗಿಯಲಿದ್ದು, ಮತ್ತೆ ಕ್ರಿಕೆಟ್ ಅಂಗಳಕ್ಕೆ ಕಾಲಿಡುವ ಸಾಧ್ಯತೆಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com