ಕ್ರೀಡೆ

ಫ್ರೀ ಹಿಟ್‌ನಲ್ಲಿ ರನ್ ಗಳಿಸಲು ತಿಣುಕಾಡಿದ ಭವಿಷ್ಯದ ನಾಯಕ ಕೊಹ್ಲಿ

ಫ್ರೀ ಹಿಟ್‌ನಲ್ಲಿ ರನ್ ಗಳಿಸಲು ತಿಣುಕಾಡಿದ ಭವಿಷ್ಯದ ನಾಯಕ ಕೊಹ್ಲಿ
ವಿರಾಟ್ ಕೊಹ್ಲಿ
Published On :
ನವದೆಹಲಿ: ಟೀಂ ಇಂಡಿಯಾದ ಭವಿಷ್ಯದ ನಾಯಕ ಎಂದೇ ಬಿಂಬಿತರಾಗಿರುವ ಉಪ ನಾಯಕ ವಿರಾಟ್ ಕೊಹ್ಲಿ ಫ್ರೀ ಹಿಟ್ ನಲ್ಲೂ ರನ್ ಗಳಿಸಲು ತಿಣುಕಾಡಿದ ಪ್ರಸಂಗ ನಿನ್ನೆ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ಸಾಬೀತಾಗಿದೆ. 
ಬಾಂಗ್ಲಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮೀರ್ ಪುರ್ ದಲ್ಲಿ ಎರಡನೇ ಏಕದಿನ ಪಂದ್ಯವಾಡಿತ್ತು. ಮೊದಲ ಪಂದ್ಯದಲ್ಲಿ ಸೋತು ಸುಣ್ಣವಾಗಿದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲೂ ಹೀನಾಯ ಸೋಲು ಅನುಭವಿಸಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದು ಮಾತ್ರ 23 ರನ್. 
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಆಗಿರುವ ವಿರಾಟ್ ಕೊಹ್ಲಿ ತಸ್ಕಿನ್ ಅಹ್ಮದ್ 3 ಓವರ್ ನ 5ನೇ ಎಸೆತವನ್ನು ವಿಕೆಟ್ ಗಿಂತ ಮುಂದೆ ಬಂದು ಬೌಲ್ ಮಾಡಿದರು. ಇದರ ಪರಿಣಾಮವಾಗಿ ಟೀಂ ಇಂಡಿಯಾಗೆ ಫ್ರೀ ಹಿಟ್ ಸಿಕ್ಕಿತ್ತು. ಫ್ರೀ ಹಿಟ್ ಎಸೆತವನ್ನು ವಿರಾಟ್ ಕೊಹ್ಲಿ ಎದುರಿಸಿದ್ದು, ಅದನ್ನು ಸಿಕ್ಸರ್ ಅಥವಾ ಬೌಂಡರಿ ಹೊಡೆಯುವ ಗೋಜಿಗೆ ಹೋಗದೆ ಸಾದಾ ಬ್ಯಾಟ್ ಮಾಡಿ ಕೇವಲ ಒಂದು ರನ್ ಗಳಿಸಿರುವುದು ಕೆಲ ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ. 
ಬಾಂಗ್ಲಾದೇಶ ಸರಣಿಯ 3 ಪಂದ್ಯಗಳ ಪೈಕಿ ಎರಡು ಪಂದ್ಯಗಳನ್ನು ಗೆದ್ದ ಬಾಂಗ್ಲಾದೇಶ ಸರಣಿ ಕೈವಶ ಮಾಡಿಕೊಂಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.