
ನವದೆಹಲಿ: ಕ್ರಿಕೆಟ್ ದೇವರು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರರಾಗಿ ಆಯ್ಕೆಯಾಗಿದ್ದಾರೆ.
ಕ್ರಿಕೆಟ್ ಆಸ್ಟ್ರೇಲಿಯಾ ನಡೆಸಿದ ಆನ್‌ಲೈನ್ ಮತದಾನದಲ್ಲಿ ಭಾರತೀಯ ಬ್ಯಾಟಿಂಗ್ ಮಾಸ್ಟರ್ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ 21ನೇ ಶತಮಾನದ ಅತ್ಯುತ್ತಮ ಟೆಸ್ಟ್ ಆಟಗಾರ ಗೌರವಕ್ಕೆ ಪಾತ್ರರಾಗಿದ್ದಾರೆ.
ಈ ಆನ್‌ಲೈನ್ ಮತದಾನದಲ್ಲಿ ಒಟ್ಟು 16 ಸಾವಿರ ಕ್ರಿಕೆಟ್ ಅಭಿಮಾನಿಗಳು ಭಾಗವಹಿಸಿದ್ದರು. ಮತದಾನ ನಡೆದ ಹತ್ತು ದಿನಗಳ ಬಳಿಕ ಫಲಿತಾಂಶ ಪ್ರಕಟಿಸಲಾಗಿದೆ.
ಸಚಿನ್ ತೆಂಡೂಲ್ಕರ್ ಅವರು ಶೇ.23ರಷ್ಟು ಮತ ಪಡೆದು ಮೊದಲ ಸ್ಥಾನದಲ್ಲಿದ್ದು, ಶ್ರೀಲಂಕಾದ ಕುಮಾರ್ ಸಂಗಕ್ಕರ್ ಎರಡನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಅಡಂ ಗಿಲ್‌ಕ್ರಿಸ್ಟ್ ಮತ್ತು ರಿಕ್ಕಿ ಪಾಂಟಿಂಗ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಜಾಕ್ವಾಸ್ ಕಾಲಿಸ್ ನಂತರದ ಸ್ಥಾನದಲ್ಲಿದ್ದಾರೆ.
Advertisement