ಏಕದಿನ ರ್ಯಾಂಕಿಂಗ್: ಅಗ್ರ 10ರಲ್ಲಿ ನಾಲ್ವರು ಭಾರತೀಯರು

ಭಾರತ ತಂಡದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೇರಿದಂತೆ, ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ನಾಲ್ವರು ಅಗ್ರ 10ರಲ್ಲಿ ಕಾಣಿಸಿಕೊಂಡಿದ್ದಾರೆ...
ರವಿಚಂದ್ರನ್ ಅಶ್ವಿನ್
ರವಿಚಂದ್ರನ್ ಅಶ್ವಿನ್
Updated on

ದುಬೈ: ಭಾರತ ತಂಡದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೇರಿದಂತೆ, ಐಸಿಸಿ ನೂತನ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ನಾಲ್ವರು ಅಗ್ರ 10ರಲ್ಲಿ ಕಾಣಿಸಿಕೊಂಡಿದ್ದಾರೆ.

ಗುರುವಾರ ಬಿಡುಗಡೆಯಾದ ಏಕದಿನ ಬೌಲರ್‍ಗಳ ಪಟ್ಟಿಯಲ್ಲಿ ಅಶ್ವಿನ್ ಎರಡು ಸ್ಥಾನಗಳ ಏರಿಕೆ ಕಾಣುವ ಮೂಲಕ 10ನೇ ಸ್ಥಾನದಲ್ಲಿದ್ದಾರೆ. ಬಾಂಗ್ಲಾದೇಶ ವಿರುದ್ಧ ಮೂರು ಏಕದಿನ ಪಂದ್ಯಗಳಿಂದ 6 ವಿಕೆಟ್ ಕಬಳಿಸಿದ ಅಶ್ವಿನ್, ರ್ಯಾಂಕಿಂಗ್ ಪಟ್ಟಿಯಲ್ಲಿ ಏರಿಕೆ ಕಂಡಿದ್ದಾರೆ.

ಕೊಹ್ಲಿ 4ನೇ ಸ್ಥಾನ: ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಭಾರತದ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಬಾಂಗ್ಲಾ ಪ್ರವಾಸದಲ್ಲಿ ವೈಫಲ್ಯ ಅನುಭವಿಸಿದರೂ ಕೊಹ್ಲಿ ಸ್ಥಾನಕ್ಕೆ ಯಾವುದೇ ತೊಂದರೆಯಾಗಿಲ್ಲ. ಇನ್ನು ಟೂರ್ನಿಯಲ್ಲಿ ಹೆಚ್ಚು ರನ್ ಗಳಿಸಿದ ಆಟಗಾರ ಶಿಖರ್ ಧವನ್ 7ನೇ ಸ್ಥಾನಕ್ಕೆ ಕುಸಿದಿದ್ದರೆ, ನಾಯಕ ಧೋನಿ 8ನೇ ಸ್ಥಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಅಗ್ರ 10ರಲ್ಲಿ ಮೂವರು ಭಾರತೀಯರು ಮಾತ್ರ ಕಾಣಿಸಿಕೊಂಡಂತಾಗಿದೆ.

ಈ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಅಗ್ರಸ್ಥಾನದಲ್ಲಿದ್ದರೆ, ಶ್ರೀಲಂಕಾದ ಕುಮಾರ ಸಂಗಕ್ಕಾರ ಎರಡು ಹಾಗೂ ದಕ್ಷಿಣ ಆಫ್ರಿಕಾದ ಹಶೀಂ ಆಮ್ಲಾ 3ನೇ ಸ್ಥಾನದಲ್ಲಿದ್ದಾರೆ. ಉಳಿದಂತೆ ಭಾರತದ ಪರ ಸುರೇಶ್ ರೈನಾ 2 ಸ್ಥಾನಗಳ ಏರಿಕೆ ಕಂಡಿದ್ದು, 18ನೇ ಸ್ಥಾನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com