ನಾಯಕ ಧೋನಿ ಸಾಧನೆಗೆ ಗಂಗೂಲಿ ಮೆಚ್ಚುಗೆ

ವಿಶ್ವಕಪ್ ಪಂದ್ಯಾವಳಿಯಲ್ಲಿ 9ನೇ ಸತತ ಗೆಲವು ದಾಖಲಿಸಿರುವ ಭಾರತ ತಂಡವನ್ನು ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಶ್ಲಾಘಿಸಿದ್ದಾರೆ...
ಮಾಜಿ ನಾಯಕ ಸೌರವ್ ಗಂಗೂಲಿ ಮತ್ತು ಮಹೇಂದ್ರ ಸಿಂಗ್ ಧೋನಿ (ಸಂಗ್ರಹ ಚಿತ್ರ)
ಮಾಜಿ ನಾಯಕ ಸೌರವ್ ಗಂಗೂಲಿ ಮತ್ತು ಮಹೇಂದ್ರ ಸಿಂಗ್ ಧೋನಿ (ಸಂಗ್ರಹ ಚಿತ್ರ)
Updated on: 

ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಸತತ ಐದನೇ ಗೆಲವು ದಾಖಲಿಸಿದ್ದಲ್ಲದೆ, ಒಟ್ಟಾರೆಯಾಗಿ ವಿಶ್ವಕಪ್ ಪಂದ್ಯಾವಳಿಯಲ್ಲಿ 9ನೇ ಸತತ ಗೆಲವು ದಾಖಲಿಸಿರುವ ಭಾರತ ತಂಡವನ್ನು ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಶ್ಲಾಘಿಸಿದ್ದಾರೆ.

ಧೋನಿ ಒರ್ವ ಉತ್ತಮ ಆಟಗಾರ. ವಿಶ್ವಕಪ್‍ನಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಜೊತೆಗೆ ತಂಡವನ್ನೂ ಯಶಸ್ಸಿನ ಹಾದಿಯಲ್ಲಿ ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. `ಧೋನಿಯವರಿಗೆ ಏಕದಿನ ಹಾಗೂ ಟಿ20 ಪಂದ್ಯಗಳ ನಾಡಿಮಿಡಿತ ಚೆನ್ನಾಗಿ ತಿಳಿದಿದೆ.

ಈ ಎರಡೂ ಮಾದರಿಯ ಪಂದ್ಯಗಳಲ್ಲಿ ತಂಡವನ್ನು ಹೇಗೆ ಮುನ್ನಡೆಸಬೇಕೆಂಬುದು ಅವರು ಚೆನ್ನಾಗಿ ಬಲ್ಲರು' ಎಂದ ಅವರು, ಧೋನಿಯ ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣ ತಂಡದ ಪ್ರದರ್ಶನವನ್ನು ಮತ್ತಷ್ಟು ಗಟ್ಟಿಯಾಗಿಸಿವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com