ಟೀಂ ಇಂಡಿಯಾ ಮತ್ತೊಮ್ಮೆ ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ: ಯುವರಾಜ್ ಸಿಂಗ್

ಪ್ರಸ್ತುತ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಮಹೇಂದ್ರ ಸಿಂಗ್ ಧೋನಿ ಉತ್ತಮ ನಾಯಕತ್ವದಲ್ಲಿ ಭಾರತ ಮತ್ತೊಮ್ಮೆ...
ಯುವರಾಜ್ ಸಿಂಗ್
ಯುವರಾಜ್ ಸಿಂಗ್
Updated on: 

ಗ್ವಾಲಿಯರ್: ಪ್ರಸ್ತುತ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಮಹೇಂದ್ರ ಸಿಂಗ್ ಧೋನಿ ಉತ್ತಮ ನಾಯಕತ್ವದಲ್ಲಿ ಭಾರತ ಮತ್ತೊಮ್ಮೆ ವಿಶ್ವಕಪ್ ಎತ್ತಿ ಹಿಡಿಯಲಿದೆ ಎಂಬ ವಿಶ್ವಾಸವಿದೆ ಎಂದು ಆಲ್ ರೌಂಡರ್ ಯುವರಾಜ್ ಸಿಂಗ್ ಹೇಳಿದ್ದಾರೆ.

ವಿಶ್ವಕಪ್‌ನ ಎಲ್ಲಾ ಲೀಗ್ ಪಂದ್ಯಗಳಲ್ಲಿ ಟೀಂ ಇಂಡಿಯಾ ತಂಡ ಅತ್ಯುತ್ತಮ ಪ್ರದರ್ಶನ ನೀಡಿದೆ. ಉತ್ತಮ ಪ್ರದರ್ಶನ ಮುಂದುವರಿದಲ್ಲಿ ಖಂಡಿತವಾಗಿಯೂ ತಂಡ ವಿಶ್ವಕಪ್ ತಮ್ಮದಾಗಿಸಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.

ಪ್ರತಿಯೊಂದು ಪಂದ್ಯದಲ್ಲಿ ಧೋನಿಯವರ ತಂತ್ರಗಾರಿಕೆ ಯಶಸ್ವಿಯಾಗಿದೆ. ಕ್ವಾರ್ಟರ್‌ಫೈನಲ್ ಪಂದ್ಯದಲ್ಲೂ ತಂಡ ಉತ್ತಮ ಪ್ರದರ್ಶನ ನೀಡುವುದು ಖಚಿತ ಎಂದರು.

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಿಬ್ ಅಖ್ತರ್ 150 ಕಿ.ಮೀ ವೇಗದಲ್ಲಿ ಬೌಲಿಂಗ್ ಎಸೆಯುತ್ತಿರುವಾಗ ಅದೊಂದು ಅದ್ಭುತ ಅನುಭವವಾಗಿತ್ತು ಎಂದು ಕ್ರಿಕೆಟಿಗ ಯುವರಾಜ್ ಸಿಂಗ್ ಹಳೆಯ ನೆನಪುಗಳನ್ನು ಮೆಲಕು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com