
ನವದೆಹಲಿ: ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಸೋಲಿನ ಬಳಿಕ ತೀವ್ರ ಟೀಕೆಗೆ ಗುರಿಯಾಗಿದ್ದ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಭಾರತಕ್ಕೆ ವಾಪಸ್ ಆಗಿದ್ದಾರೆ.
ಆಸ್ಟ್ರೇಲಿಯ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನಕ್ಕೆ, ನಟಿ ಅನುಷ್ಕಾ ಶರ್ಮಾ ಅವರೇ ಕಾರಣ ಎಂಬ ಟೀಕೆ ಕೇಳಿಬಂದಿತ್ತು. ಆದರೆ ಇಂತಹ ಆರೋಪಗಳಿಗೆ ವಿರಾಟ್ ಕೊಹ್ಲಿ ಮಾತ್ರ ಯಾವುದೇ ರೀತಿಯ ಸೊಪ್ಪು ಹಾಕಿಲ್ಲ. ಅಲ್ಲದೆ ತಮ್ಮ ಗೆಳತಿಯ ಕೈ ಹಿಡಿದು ಆಗಮಿಸುವುದರೊಂದಿಗೆ ಆಕೆಯೊಂದಿಗೆ ತಾವಿದ್ದೇವೆ ಎಂದು ಸಾರಿದ್ದಾರೆ.
ವಿಶ್ವಕಪ್ ಟೂರ್ನಿ ಬಳಿಕ ಭಾರತೀಯ ಆಟಗಾರರು, ಶುಕ್ರವಾರ ರಾತ್ರಿ ತವರಿಗೆ ಆಗಮಿಸಿದ್ದು, ಈ ವೇಳೆ ವಿರಾಟ್ ಕೊಹ್ಲಿ, ಮುಂಬೈ ವಿಮಾನ ನಿಲ್ದಾಣದಲ್ಲಿ ಗೆಳತಿ ಅನುಷ್ಕಾ ಶರ್ಮಾ ಕೈಹಿಡಿದುಕೊಂಡೇ ಹೊರಬಂದಿದ್ದಾರೆ. ಇದು ಎಲ್ಲರ ಗಮನ ಸೆಳೆಯಿತು. ಇಬ್ಬರ ನಡುವಿನ ಪ್ರೀತಿ-ಪ್ರೇಮ ವಿಚಾರ ಈಗಾಗಲೇ ಬಹಿರಂಗವಾಗಿದ್ದರೂ, ಇಬ್ಬರೂ ಭಾರತದಲ್ಲಿ ಪರಸ್ಪರ ಕೈ ಕೈ ಹಿಡಿದು ಇಷ್ಟು ಬಹಿರಂಗವಾಗಿ ಕಾಣಿಸಿಕೊಂಡಿರಲಿಲ್ಲ.
Advertisement