
ಮೆಲ್ಬೋರ್ನ್: ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿರುವ ಕಿವೀಸ್ ಪಡೆಯ ಆರಂಭಿಕ 3 ವಿಕೆಟ್ ಗಳು ಪತನವಾಗಿದೆ.
ಆರಂಭಿಕರಾದ ಮಾರ್ಟಿನ್ ಗಪ್ಟಿಲ್ (15ರನ್), ಮೆಕ್ಕಲಮ್ (0) ಮತ್ತು ವಿಲಿಯಮ್ಸನ್ (12) ಬೇಗನೆ ಪೆವಿಲಿಯನ್ ಸೇರಿಸಿಕೊಳ್ಳುವುದರೊಂದಿಗೆ ನ್ಯೂಜಿಲೆಂಡ್ ತಂಡ ಆರಂಭಿಕ ಆಘಾತಕ್ಕೊಳಗಾಗಿದೆ. ಇನ್ನು ಪ್ರಸ್ತುತ ಕ್ರೀಸ್ ನಲ್ಲಿರುವ ಮಧ್ಯಮ ಕ್ರಮಾಂಕದ ಆಟಗಾರರಾದ ಟೇಲರ್ ಮತ್ತು ಜಿಡಿ ಎಲ್ಲಿಯಟ್ ನ್ಯೂಜಿಲೆಂಡ್ ತಂಡಕ್ಕೆ ಚೇತರಿಕೆ ನೀಡಿದ್ದು, ಎಲ್ಲಿಯಟ್ ಆಕರ್ಷಕ ಅರ್ಧ ಶತಕ ದಾಖಲಿಸಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡದ ಪರ ಸ್ಟಾರ್ಕ್, ಜಾನ್ಸನ್, ಮ್ಯಾಕ್ಸ್ ವೆಲ್ ತಲಾ 1 ವಿಕೆಟ್ ಕಳಸಿದ್ದಾರೆ. ಇತ್ತೀಚಿನ ವರದಿಗಳು ಬಂದಾಗ ನ್ಯೂಜಿಲೆಂಡ್ ತಂಡ 29.3 ಓವರ್ ಗಳಲ್ಲಿ 3 ವಿಕೆಟ್ ಗಳನ್ನು ಕಳೆದುಕೊಂಡು 120 ರನ್ ಗಳಿಸಿದೆ.
Advertisement