

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಅಬ್ಬರ ಬ್ಯಾಟಿಂಗ್ ನಿಂದಾಗಿ ಆರ್ ಸಿಬಿ 10 ಓವರ್ ಮುಕ್ತಾಯಕ್ಕೆ 104 ರನ್ ಗಳಿಸಿದೆ.
ಟ್ಯಾಸ್ ಗೆದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲ ಬ್ಯಾಟ್ ಮಾಡಿದ ಆರ್ ಸಿಬಿ ತಂಡದ ಕ್ರಿಸ್ ಗೇಯ್ಲ್ 29 ಎಸೆತೆಗಳಲ್ಲಿ 54 ರನ್ ಗಳಿಸಿ ಆಡುತ್ತಿದ್ದಾರೆ. ಗೇಯ್ಲ್ ಗೆ ಸಾಥ್ ನೀಡುತ್ತಿರುವ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ 24 ಎಸೆತಗಳಲ್ಲಿ 29 ರನ್ ಗಳಿಸಿದ್ದಾರೆ.