

ಮೊಹಾಲಿ: ಟೀಂ ಇಂಡಿಯಾ ಆಟಗಾರರಾದ ರೋಹಿತ್ ಶರ್ಮಾ, ಭುವನೇಶ್ವರ್ ಕುಮಾರ್ ಮತ್ತು ಸ್ಟುವರ್ಟ್ ಬಿನ್ನಿ ಅವರು ತಂತಮ್ಮ ರಾಜ್ಯ ತಂಡಗಳ ಪರ ರಣಜಿ ಪಂದ್ಯಗಳನ್ನಾಡಲು ಅವಕಾಶ ನೀಡಿ, ಅವರನ್ನು ರಾಷ್ಟ್ರೀಯ ತಂಡದಿಂದ ಬಿಡುಗಡೆಗೊಳಿಸಲಾಗಿದೆ.
ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಈ ಮೂವರು ಆಟಗಾರರು ಆಯ್ಕೆಯಾಗಿದ್ದರೂ ಗುರುವಾರ ಆರಂಭವಾದ ಪಂದ್ಯದಲ್ಲಿ ಆಡುವ 11ರಲ್ಲಿ ಸ್ಥಾನ ಪಡೆಯಲಿಲ್ಲ. ಹಾಗಾಗಿ ಈ ಮೂವರಿಗೆ ರಣಜಿ ಟೂರ್ನಿಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬೆಂಗಳೂರಿನಲ್ಲಿ ನಡೆಯಲಿರುವ ದ.ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.