ಭಾರತ-ಪಾಕ್ ಕ್ರಿಕೆಟ್ ಸರಣಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಎಂಇಎ

ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಗೆ ಅನುಮತಿ ನೀಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಗೆ ಅನುಮತಿ ನೀಡುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ಹೇಳಿದೆ.

ಭಾರತ-ಪಾಕ್ ಕ್ರಿಕೆಟ್ ಸರಣಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಭಾರತ-ಪಾಕ್ ಕ್ರಿಕೆಟ್ ಸರಣಿ ನಡೆಸಲು ನಿನ್ನೆ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು ಅನುಮತಿ ನೀಡಿದ್ದರು.

ಇನ್ನು ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲಾ ಅವರು ಡಿಸೆಂಬರ್ 15ರಿಂದ ಭಾರತ-ಪಾಕ್ ಕ್ರಿಕೆಟ್ ಸರಣಿ ಆರಂಭವಾಗಲಿದೆ ಎಂದು ಹೇಳಿದ್ದರು.

ಮೂಲಗಳ ಪ್ರಕಾರ, ಮೂರನೇ ದೇಶದಲ್ಲಿ ಕ್ರಿಕೆಟ್ ಸರಣಿ ನಡೆಸಲು ವಿದೇಶಾಂಗ ಸಚಿವಾಲಯದ ಅನುಮತಿ ಅಗತ್ಯ ಇದ್ದು, ಅನುಮತಿ ದೊರೆತ ನಂತರ ಕೇಂದ್ರ ಗೃಹ ಸಚಿವಾಲಯ ಸರಣಿ ನಡೆಯುವ ದೇಶಕ್ಕೆ ಭದ್ರತಾ ತಂಡ ಕಳುಹಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com