ರ್ಯಾಂಕಿಂಗ್: 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ

ಸೋಮವಾರ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ಅಂತರಾಷ್ಟ್ರೀಯ ಟಿ20...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ದುಬೈ: ಸೋಮವಾರ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ಅಂತರಾಷ್ಟ್ರೀಯ ಟಿ20 ರ್ಯಾಂಕಿಂಗ್ ಪಟ್ಟಿಯಲ್ಲಿ ಎರಡು ಸ್ಥಾನ ಕುಸಿತ ಕಂಡಿದೆ.

ಸರಣಿ ಆರಂಭವಾಗುವ ಮುನ್ನ ಭಾರತ ನಾಲ್ಕನೇ ಸ್ಥಾನದಲ್ಲಿದ್ದರೆ, ಪ್ರವಾಸಿ ದಕ್ಷಿಣ ಆಫ್ರಿಕಾ 6ನೇ ಸ್ಥಾನದಲ್ಲಿತ್ತು. ಆದರೆ ಧರ್ಮಶಾಲ ಮತ್ತು ಕಟಕ್‌ನಲ್ಲಿ ನಡೆದ ಎರಡು ಪಂದ್ಯಗಳಲ್ಲಿ ದಯನೀಯ ಸೋಲು ಅನುಭವಿಸಿದ ಧೋನಿ ಬಳಗ, ಇದೀಗ ತನ್ನ ನಾಲ್ಕನೇ ಸ್ಥಾನವನ್ನು ವೆಸ್ಟ್ ಇಂಡೀಸ್‌ಗೆ ಬಿಟ್ಟುಕೊಟ್ಟಿದೆ.

ಇನ್ನು ಫಾಪ್ ಡು ಪ್ಲೆಸಿಸ್ ನಾಯಕತ್ವದ ದಕ್ಷಿಣ ಆಫ್ರಿಕಾ 5ನೇ ಸ್ಥಾನದಲ್ಲಿದೆ. ಇನ್ನುಳಿದಂತೆ ಶ್ರೀಲಂಕಾ ಮೊದಲ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಹಾಗೂ ಆಸ್ಟ್ರೇಲಿಯಾ ತದನಂತರದ ಸ್ಥಾನಗಳಲ್ಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com