ಬಿಸಿಸಿಐ ಕಚೇರಿಗೆ ಮುತ್ತಿಗೆ ಹಾಕಿದ ಶಿವಸೇನಾ ಕಾರ್ಯಕರ್ತರು (ಸಂಗ್ರಹ ಚಿತ್ರ)
ಕ್ರೀಡೆ
ಉದ್ದೇಶಿತ ಭಾರತ-ಪಾಕ್ ಕ್ರಿಕೆಟ್ ಸರಣಿ ರದ್ದು: ಬಿಸಿಸಿಐ ಮೂಲಗಳು
ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಉದ್ದೇಶಿತ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಯನ್ನು ರದ್ದುಪಡಿಸಲಾಗಿದೆ ಎಂದು...
ನವದೆಹಲಿ: ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಉದ್ದೇಶಿತ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿಯನ್ನು ರದ್ದುಪಡಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಮೂಲಗಳು ತಿಳಿಸಿವೆ.
ಭಾರತ-ಪಾಕ್ ಕ್ರಿಕೆಟ್ ಸರಣಿ ನಡೆಸುವ ಸಂಬಂಧ ಬಿಸಿಸಿಐ ಮುಖ್ಯಸ್ಥ ಶಶಾಂಕ್ ಮನೋಹರ್ ಹಾಗೂ ಪಾಕಿಸ್ತಾನ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಶಹರಿಯಾರ್ ಖಾನ್ ಅವರ ಮಾತುಕತೆಗೆ ಶಿವಸೇನೆ ವಿರೋಧ ವ್ಯಕ್ತಪಡಿಸಿದ ಮಾರನೇ ದಿನವೇ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ.
ನಿನ್ನೆ ಪಾಕ್ ಜೊತೆ ಕ್ರಿಕೆಟ್ ಸರಣಿ ವಿರೋಧಿಸಿ ಶಿವಸೇನೆ ಕಾರ್ಯಕರ್ತರು ಬಿಸಿಸಿಐ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ, ಭಿತ್ತಿಚಿತ್ರ ಪ್ರದರ್ಶಿಸಿ ದಾಂಧಲೆ ನಡೆಸಿದ್ದರು.
ಶಶಾಂಕ್ ಮನೋಹರ್ ಅವರಿಗೂ ಮುತ್ತಿಗೆ ಹಾಕಿದ್ದ ಶಿವಸೇನೆ ಕಾರ್ಯಕರ್ತರು, ಅವರಿಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು. ಅಲ್ಲದೆ ಯಾವುದೇ ಕಾರಣಕ್ಕೂ ಭಾರತ ಪಾಕ್ ನಡುವೆ ಕ್ರಿಕೆಟ್ ಸರಣಿ ಆಯೋಜಿಸ ಬಾರದು ಎಂದು ಒತ್ತಾಯಿಸಿದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ