ಟಿ20ಯಲ್ಲಿ ಕೊಹ್ಲಿ ನಂಬರ್ ಒನ್

ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕಣಕ್ಕಿಳಿಯದ ಆಸ್ಟ್ರೇಲಿಯಾದ ಏರಾನ್ ಫಿಂಚ್ ಐಸಿಸಿ ಟಿ20 ರ್ಯಾಂಕಿಂಗ್‍ನಲ್ಲಿ 17 ಅಂಕಗಳನ್ನು ಕಳೆದುಕೊಳ್ಳುವ ಮೂಲಕ ತಮ್ಮ ಅಗ್ರಸ್ಥಾನವನ್ನು ಕಳೆದುಕೊಂಡಿದ್ದಾರೆ...
ವಿರಾಟ್ ಕೊಹ್ಲಿ (ಸಂಗ್ರಹ ಚಿತ್ರ)
ವಿರಾಟ್ ಕೊಹ್ಲಿ (ಸಂಗ್ರಹ ಚಿತ್ರ)
Updated on: 

ದುಬೈ: ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಕಣಕ್ಕಿಳಿಯದ ಆಸ್ಟ್ರೇಲಿಯಾದ ಏರಾನ್ ಫಿಂಚ್ ಐಸಿಸಿ ಟಿ20 ರ್ಯಾಂಕಿಂಗ್‍ನಲ್ಲಿ 17 ಅಂಕಗಳನ್ನು ಕಳೆದುಕೊಳ್ಳುವ ಮೂಲಕ ತಮ್ಮ  ಅಗ್ರಸ್ಥಾನವನ್ನು ಕಳೆದುಕೊಂಡಿದ್ದಾರೆ.
 
ಈ ಮೂಲಕ ಟೀಂ ಇಂಡಿಯಾ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಮುನ್ನಡೆ ಪಡೆದು ನಂಬರ್ ಒನ್ ಸ್ಥಾನಕ್ಕೇರಿದ್ದಾರೆ. ಮಂಗಳವಾರ ಬಿಡುಗಡೆಯಾದ ನೂತನ ಐಸಿಸಿ ಟಿ20 ರ್ಯಾಂಕಿಂಗ್ ನಲ್ಲಿ ವಿರಾಟ್ ಕೊಹ್ಲಿ 861 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಏರಾನ್ ಫಿಂಚ್ 854 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಇನ್ನು ಇಂಗ್ಲೆಂಡ್‍ನ ಅಲೆಕ್ಸ್ ಹೇಲ್ಸ್ 841 ಅಂಕಗಳೊಂದಿಗೆ ತೃತೀಯ ಸ್ಥಾನದಲ್ಲಿದ್ದರೆ, ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‍ಮನ್ ಸುರೇಶ್ ರೈನಾ 11ನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com