ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆ: ಶ್ರೀನಿವಾಸನ್ ಪಾಲ್ಗೊಳ್ಳುವಿಕೆ, ಸುಪ್ರೀಂ ಸ್ಪಷ್ಟನೆ ಕೇಳಿದ ಬಿಸಿಸಿಐ

ಬಿಸಿಸಿಐನ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರು ಬಿಸಿಸಿಐನ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುವ ಕುರಿತು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಬೇಕು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಕೇಳಿದೆ...
ಎನ್ ಶ್ರೀನಿವಾಸನ್ (ಸಂಗ್ರಹ ಚಿತ್ರ)
ಎನ್ ಶ್ರೀನಿವಾಸನ್ (ಸಂಗ್ರಹ ಚಿತ್ರ)

ನವದೆಹಲಿ: ಬಿಸಿಸಿಐನ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರು ಬಿಸಿಸಿಐನ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುವ ಕುರಿತು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಬೇಕು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ  ಮಂಡಳಿ ಕೇಳಿದೆ.

ಮೂಲಗಳ ಪ್ರಕಾರ ಪ್ರಸ್ತುತ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ನ ಮುಖ್ಯಸ್ಥರಾಗಿರುವ ಎನ್.ಶ್ರೀನಿವಾಸನ್ ಅವರು, ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ. ಆದರೆ ಅವರ ವಿರುದ್ಧ  ಇರುವ ಆರೋಪಗಳಿರುವ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಬಿಸಿಸಿಐ ಪರ ವಕೀಲರು ಮನವಿ ಮಾಡಿದ್ದಾರೆ. ಅಲ್ಲದೆ ಬಿಸಿಸಿಐನ ವಾರ್ಷಿಕ ಸಭೆ ನಡೆಸಲೇಬೇಕಿದ್ದು, ಸಭೆಯಲ್ಲಿ  ಶ್ರೀನಿವಾಸನ್ ಪಾಲ್ಗೊಳ್ಳಬೇಕೇ..? ಅಥವಾ ಪಾಲ್ಗೊಳ್ಳಬಾರದೇ ಎಂಬುದರ ಕುರಿತು ನಿರ್ಧಾರ ಕೈಗೊಳ್ಳಬೇಕಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಅರ್ಜಿಯನ್ನು ಸ್ವೀಕರಿಸಿರುವ ಸುಪ್ರೀಂಕೋರ್ಟ್ ಪ್ರಸ್ತುತ ಅರ್ಜಿಯ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆಯಾದರೂ, ವಿಚಾರಣೆಗೆ ನಿಖರ ದಿನಾಂಕವನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇನ್ನು ಈ ಹಿಂದೆ  ನಡೆದ ಬಿಸಿಸಿಐ ಸಭೆಯಲ್ಲಿ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ನ ಪ್ರತಿನಿಧಿಯಾಗಿ ಎನ್ ಶ್ರೀನಿವಾಸನ್ ಪಾಲ್ಗೊಳ್ಳುವಿಕೆಯನ್ನು ಬಿಸಿಸಿಐ ಸದಸ್ಯರು ವಿರೋಧಿಸಿದ  ಹಿನ್ನಲೆಯಲ್ಲಿ ವಾರ್ಷಿಕ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com