ಒಲಿಂಪಿಕ್ಸ್ ನ ಸೌಹಾರ್ದ ರಾಯಭಾರಿಯಾಗಲು ಅಭಿನವ್ ಬಿಂದ್ರಾ ಸಮ್ಮತಿ

2008ರ ಬೀಜಿಂಗ್ ಒಲಿಂಪಿಕ್ಸ್ ನ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ 2016ರ ರಿಯೋ ಒಲಿಂಪಿಕ್ಸ್ ನ ಸೌಹಾರ್ದ ರಾಯಭಾರಿಯಾಗಲು ಸಮ್ಮತಿ ಸೂಚಿಸಿದ್ದಾರೆ...
ಅಭಿನವ್ ಬಿಂದ್ರಾ
ಅಭಿನವ್ ಬಿಂದ್ರಾ

2008ರ ಬೀಜಿಂಗ್ ಒಲಿಂಪಿಕ್ಸ್ ನ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ 2016ರ ರಿಯೋ ಒಲಿಂಪಿಕ್ಸ್ ನ ಸೌಹಾರ್ದ ರಾಯಭಾರಿಯಾಗಲು ಸಮ್ಮತಿ ಸೂಚಿಸಿದ್ದಾರೆ.

ರಿಯೋ ಒಲಿಂಪಿಕ್ಸ್ ನಲ್ಲಿ ಭಾರತ ಪರ ಸೌಹಾರ್ದ ರಾಯಭಾರಿಯಾಗಲು 35 ವರ್ಷದ ಅಭಿನವ್ ಬಿಂದ್ರಾಗೆ ಇಂಡಿಯನ್ ಒಲಿಂಪಿಕ್ಸ್ ಅಸೋಸಿಯೇಷನ್(ಐಒಎ) ಆಹ್ವಾನ ನೀಡಿತ್ತು. ಐಒಎಯ ಆಹ್ವಾನವನ್ನು ಸ್ವೀಕರಿಸಿರುವುದಾಗಿ ಬಿಂದ್ರಾ ಅವರು ತಮ್ಮ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ರಿಯೋ ಒಲಿಂಪಿಕ್ಸ್ ನ ಸೌಹಾರ್ದ ರಾಯಭಾರಿಯಾಗಲು ಆಹ್ವಾನ ನೀಡಿದ ಇಂಡಿಯನ್ ಒಲಿಂಪಿಕ್ಸ್ ಅಸೋಸಿಯೇಷನ್ ಗೆ ನಾನು ಚಿರಋಣಿ ಎಂದು ಟ್ವೀಟಿಸಿದ್ದಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ರನ್ನು ಒಲಿಂಪಿಕ್ಸ್ ನ ರಾಯಭಾರಿಯಾಗಿ ಆಯ್ಕೆ ಮಾಡಿದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಲ್ಮಾನ್ ಖಾನ್ ಆಯ್ಕೆ ವಿರೋಧಿಸಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಗೌತಮ್ ಗಂಭೀರ್ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದ ಅಭಿನವ್ ಬಿಂದ್ರಾರನ್ನು ರಾಯಭಾರಿಯಾಗಿ ಆಯ್ಕೆ ಮಾಡಬೇಕಿತ್ತು ಎಂದು ಐಒಎಗೆ ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com