ನೀತಾ ಅಂಬಾನಿ ಅಂತರರಾಷ್ಟ್ರೀಯ ಒಲಂಪಿಕ್ ಸಮಿತಿಯ ಮೊದಲ ಭಾರತೀಯ ಮಹಿಳಾ ಸದಸ್ಯೆ

ರಿಲಯನ್ಸ್ ಫೌಂಡೇಷನ್‌ನ ಸಂಸ್ಥಾಪಕ ಮುಖ್ಯಸ್ಥೆ ನೀತಾ ಅಂಬಾನಿ ಅವರು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯೆಯಾಗಿ ಆಯ್ಕೆಯಾಗಿದ್ದು, ...
ನೀತಾ ಅಂಬಾನಿ
ನೀತಾ ಅಂಬಾನಿ

ರಿಯೊ ಡಿ ಜನೈರೊ : ರಿಲಯನ್ಸ್ ಫೌಂಡೇಷನ್‌ನ ಸಂಸ್ಥಾಪಕ ಮುಖ್ಯಸ್ಥೆ ನೀತಾ ಅಂಬಾನಿ ಅವರು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯೆಯಾಗಿ ಆಯ್ಕೆಯಾಗಿದ್ದು, ಈ ಸ್ಥಾನಕ್ಕೇರಿದ ಭಾರತದ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಜೂನ್‌ನಲ್ಲಿ ನಡೆದಿದ್ದ ಐಒಸಿ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ನೀತಾ ಅಂಬಾನಿ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಗುರುವಾರ  ನಡೆದ ಸಭೆಯಲ್ಲಿ ಅವರ  ಆಯ್ಕೆಯನ್ನು ಅಧಿಕೃತಗೊಳಿಸಲಾಗಿದೆ.

52 ವರ್ಷದ ನೀತಾ ಅವರು ಈಗ ಐಒಸಿಯಲ್ಲಿರುವ ಭಾರತದ ಏಕೈಕ ಪ್ರತಿನಿಧಿಯಾಗಿದ್ದಾರೆ. 2001ರಿಂದ 2014ರ ವರೆಗೆ ಭಾರತ ಒಲಿಂಪಿಕ್‌ ಸಂಸ್ಥೆಯ ಮಹಾ ಕಾರ್ಯದರ್ಶಿ ರಣಧೀರ್ ಸಿಂಗ್ ಅವರು ಐಒಸಿ ಸದಸ್ಯರಾಗಿದ್ದರು.

ನೀತಾ ಅವರು ಭಾರತದಲ್ಲಿ ವಿವಿಧ ಕ್ರೀಡಾಚಟುವಟಿಕೆಗಳ ಬೆಳವಣಿಗೆಗೆ ಕಾರಣರಾಗಿದ್ದಾರೆ. ಗ್ರಾಮೀಣ ಮಟ್ಟದ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ. ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹೊಂದಿದ್ದು ಇಂಡಿಯನ್‌ ಸೂಪರ್‌ ಲೀಗ್‌ನಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com