ರಿಯೋ ಒಲಿಂಪಿಕ್ಸ್: ಶೂಟಿಂಗ್ ನಲ್ಲಿ ಫೈನಲ್ಗೆ ಬಿಂದ್ರಾ, ನಾರಂಗ್ ಔಟ್

ಬೀಜಿಂಗ್ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಇದೀಗ ರಿಯೋ ಒಲಿಂಪಿಕ್ಸ್ ನಲ್ಲೂ ಫೈನಲ್ ಗೆ ಎಂಟ್ರಿ ಕೊಟ್ಟಿದ್ದು ಮತ್ತೊಮ್ಮೆ ಚಿನ್ನ ಗೆಲ್ಲುವ...
ಅಭಿನವ್ ಬಿಂದ್ರಾ
ಅಭಿನವ್ ಬಿಂದ್ರಾ

ರಿಯೋ ಡಿ ಜನೈರೋ: ಬೀಜಿಂಗ್ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಇದೀಗ ರಿಯೋ ಒಲಿಂಪಿಕ್ಸ್ ನಲ್ಲೂ ಫೈನಲ್ ಗೆ ಎಂಟ್ರಿ ಕೊಟ್ಟಿದ್ದು ಮತ್ತೊಮ್ಮೆ ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದಾರೆ.

10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಫೈನಲ್ ಅರ್ಹತಾ ಸುತ್ತಿನಲ್ಲಿ ಬಿಂದ್ರಾ 625.7 ಅಂಕ ಗಳಿಸುವುದರೊಂದಿಗೆ 7ನೇ ಸ್ಥಾನ ಪಡೆದು ಫೈಲ್ ಗೆ ಲಗ್ಗೆ ಇಟ್ಟಿದ್ದಾರೆ.

ಭಾರತದ ಮತ್ತೊರ್ವ ಸ್ಪರ್ಧಿ ಗಗನ್ ನಾರಂಗ್ ಕೂಡ ಇದೇ ವಿಭಾಗದಲ್ಲಿ ಸ್ಪರ್ಧಿಸಿದ್ದು ಫೈನಲ್ ಪ್ರವೇಶಿಸುವುದರಲ್ಲಿ ವಿಫಲರಾಗಿದ್ದಾರೆ. ನಾರಂಗ 23ನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದು ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಶೂಟಿಂಗ್ ನಲ್ಲಿ ಇಟಲಿಯ ನಿಕೋಲೊ 630.2 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com