
ಹೈದರಾಬಾದ್: ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬೆಳ್ಳಿತಾರೆ ಪಿವಿ ಸಿಂಧು ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.
ವಿಮಾನ ನಿಲ್ದಾಣದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಚಲರಾಜಪ್ಪ ಸೇರಿದಂತೆ ರಾಜಕೀಯ ಮುಖಂಡರು, ಗಣ್ಯರು ಪಿವಿ ಸಿಂಧು ಹಾಗೂ ಕೋಚ್ ಗೋಪಿಚಂದ್ ಅವರನ್ನು ಬರ ಮಾಡಿಕೊಂಡರು. ನಂತರ ತೆರೆದ ವಾಹನದಲ್ಲಿ ಕೋಚ್ ಪುಲ್ಲೇಲ ಗೋಪಿಚಂದ್ ಹಾಗೂ ಪಿವಿ ಸಿಂಧು ಅವರನ್ನು ಮೆರವಣಿಗೆ ಮೂಲಕ ಗಚ್ಚಿಬೌಳಿ ಕ್ರೀಡಾಂಗಣಕ್ಕೆ ಕರೆದ್ಯೊಯ್ದರು. ಅಭೂತಪೂರ್ವ ಸಾಧನೆ ಮಾಡಿರುವ ಪಿವಿ ಸಿಂಧು ಅವರಿಗೆ ಗಚ್ಚಿಬೌಳಿ ಕ್ರೀಡಾಂಗಣದಲ್ಲಿ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ಸಿಂಧು ಆಗಮನದ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಸಿಂಧು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಜಯ ಘೋಷ ಕೂಗಿದರು. ನಿಲ್ದಾಣದಲ್ಲಿ ಸೇರಿದ್ದ ತಮ್ಮ ಅಭಿಮಾನಿಗಳತ್ತ ಕೈಬೀಸಿದರು.
ಬ್ರೆಜಿಲ್ ನ ರಿಯೋ ಡಿ ಜನೈರೋದಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಪದಕ ಗೆದ್ದು ಪಿವಿ ಸಿಂಧುಗೆ ಇತಿಹಾಸ ನಿರ್ಮಿಸಿದ್ದರು.
Advertisement