ವಿರಾಟ್ ಕೊಹ್ಲಿ ಗರಿಷ್ಟ ರನ್ ದಾಖಲೆ ಮುರಿದ ಕನ್ನಡಿಗ ಕರುಣ್ ನಾಯರ್

ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ...
Updated on: 

ಮುಂಬೈ: ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ದಾಖಲೆಯೊಂದನ್ನು ಅಳಿಸಿ ಹಾಕಿದ್ದಾರೆ.

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವೈಯಕ್ತಿಕ ಗರಿಷ್ಠ ಮೊತ್ತ 235 ರನ್ ಗಳ ಗಳಿಸಿದ್ದು ಈ ದಾಖಲೆಯನ್ನು ಕರುಣ್ ನಾಯರ್ ಅಳಿಸಿ ಹಾಕಿದ್ದಾರೆ.

ಟೆಸ್ಟ್ ನಲ್ಲಿ ಕರುಣ್ ನಾಯರ್ ಚೊಚ್ಚಲ ದ್ವಿಶತಕ ಸಾಧನೆ ಮಾಡಿದ್ದಾರೆ. ಪ್ರಸ್ತುತ ನಡೆಸುತ್ತಿರುವ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಗೆ ಪಾದಾರ್ಪಣೆ ಮಾಡಿದ್ದ ಕರುಣ್ ನಾಯರ್ ಎರಡನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಸಾಧನೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com