ನವದೆಹಲಿ: ಗಾಯ ಸಮಸ್ಯೆಯಿಂದ ಬಳಲುತ್ತಿರುವ ಭಾರತದ ಟೆನಿಸ್ ಸ್ಟಾರ್ ಸೋಮ್‌ದೇವ್ ದೇವವರ್ಮನ್ ಅವರು ತಮ್ಮ ಟೆನಿಸ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ ಟ್ವೀಟರ್ ಖಾತೆಯಲ್ಲಿ ಹೊಸ ವರ್ಷದಂದೆ ತಮ್ಮ ಟೆನಿಸ್ ವೃತ್ತಿ ಬದುಕಿಗೆ ವಿದಾಯ ಘೋಷಿಸಿರುವ ಸೋಮ್‌ದೇವ್ ಅವರು ಹೊಸ ಬದುಕಿನೊಂದಿಗೆ ಹೊಸ ವರ್ಷಕ್ಕೆ ಕಾಲಿಡುವುದಾಗಿ ಹೇಳಿದ್ದಾರೆ. ಹಲವು ವರ್ಷಗಳಿಂದ ನನಗೆ ಪ್ರೋತ್ಸಾಹ ಮತ್ತು ಪ್ರೀತಿ ನೀಡಿದ ಅಭಿಮಾನಿಗಳಿಗೆ ನನ್ನ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
31 ವರ್ಷದ ಸೋಮ್ದೇವ್ 2008ರಲ್ಲಿ ಟೆನಿಸ್ ಬದುಕಿಗೆ ಪಾದಾರ್ಪಣೆ ಮಾಡಿದರು. 2012ರಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸೋಮ್ದೇವ್ ತಮ್ಮ ವೃತ್ತಿ ಬದುಕಿಗೆ ವಿದಾಯ ಘೋಷಿಸಿದ್ದಾರೆ.