ವಿರೇಂದ್ರ ಸೆಹ್ವಾಗ್
ಕ್ರೀಡೆ
ಕಿಂಗ್ಸ್ ಇಲೆವೆನ್ ಗೆ ವಿರೇಂದ್ರ ಸೆಹ್ವಾಗ್ ಪ್ರಧಾನ ಸಲಹೆಗಾರ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪ್ರಧಾನ ಸಲಹೆಗಾರನಾಗಿ ಭಾರತದ ಮಾಜಿ ಆರಂಭಿಕ ಆಟಗಾರ...
ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪ್ರಧಾನ ಸಲಹೆಗಾರನಾಗಿ ಭಾರತದ ಮಾಜಿ ಆರಂಭಿಕ ಆಟಗಾರ ವಿರೇಂದ್ರ ಸೆಹ್ವಾಗ್ ಆಯ್ಕೆಯಾಗಿದ್ದಾರೆ.
ವಿರೇಂದ್ರ ಸೆಹ್ವಾಗ್ ಕಳೆದ ಎರಡು ಆವೃತ್ತಿಗಳಲ್ಲಿ ತಂಡದ ಆಂತರಿಕ ಭಾಗವಾಗಿದ್ದರು. ತಂಡದ ಪರಿಸ್ಥಿತಿಯನ್ನು ಚೆನ್ನಾಗಿ ಅರಿತ್ತಿದ್ದು, ಅವರನ್ನು ಪ್ರಧಾನ ಮಾರ್ಗದರ್ಶಕರನ್ನಾಗಿ ನೇಮಿಸಲಾಗಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಧಿಕೃತ ಹೇಳಿಕೆ ನೀಡಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ