ಏಷ್ಯಾಕಪ್, ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ, ಮನೀಶ್ ಪಾಂಡೆಗೆ ಕೊಕ್

ಮುಂಬರುವ ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ ಸರಣಿಗಾಗಿ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು, ಕರ್ನಾಟಕದ ಮನೀಶ್ ಪಾಂಡೆ ಸ್ಥಾನ...
ಟೀಂ ಇಂಡಿಯಾ
ಟೀಂ ಇಂಡಿಯಾ
Updated on: 

ಮುಂಬೈ: ಮುಂಬರುವ ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ ಸರಣಿಗಾಗಿ ಬಿಸಿಸಿಐ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು, ಕರ್ನಾಟಕದ ಮನೀಶ್ ಪಾಂಡೆ ಸ್ಥಾನ ಕಳೆದುಕೊಂಡಿದ್ದಾರೆ.

ಮನೀಶ್ ಪಾಂಡೆ ಹಾಗೂ ಅಜಿಂಕ್ಯಾ ರಹಾನೆ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೆ ಬಿಸಿಸಿಐ ಆಯ್ಕೆ ಸಮಿತಿ ಅಜಿಂಕ್ಯಾ ರಹಾನೆಗೆ ಟೀಂ ಇಂಡಿಯಾದಲ್ಲಿ ಸ್ಥಾನ ನೀಡಿದೆ.

ಇದೇ ಫೆಬ್ರವರಿ 24ರಿಂದ ಮಾರ್ಚ್ 6 ವರಗೆ ನಡೆಯುವ ಏಷ್ಯಾ ಕಪ್ ಮತ್ತು ಮಾರ್ಚ್ 18 ರಿಂದ ನಡೆಯಲಿರುವ ಟಿ-20 ವಿಶ್ವಕಪ್ ಸರಣಿಗೆ ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್  ನೇತೃತ್ವದಲ್ಲಿ ತಂಡವನ್ನು ಆಯ್ಕೆ ಮಾಡಲಾಗಿದ್ದು, ಇಂದು ಪ್ರಕಟಿಸಿದೆ.

ಟಿ-20 ವಿಶ್ವಕಪ್ ಗೆಲ್ಲುವ ಫೆವರಿಟ್ ತಂಡಗಳಲ್ಲಿ ಭಾರತ ಪ್ರಮುಖ ತಂಡವಾಗಿದ್ದು, ಇದೇ ಕಾರಣಕ್ಕೆ ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಸಿದ್ಧಪಡಿಸುವ ಹೊಣೆ ಆಯ್ಕೆಗಾರರ ಮೇಲಿತ್ತು. ಹೀಗಾಗಿ  ಟಿ20 ವಿಶ್ವಕಪ್ ಗೂ ಮೊದಲು ಬರುವ ಸರಣಿಗಳಲ್ಲಿ ಆಟಗಾರರ ಫಿಟ್ ನೆಸ್ ಹಾಗೂ ಫಾರ್ಮ್ ಪರೀಕ್ಷೆಗೆ ಏಷ್ಯಾಕಪ್ ಟೂರ್ನಿ ಮತ್ತು ಶ್ರೀಲಂಕಾ ವಿರುದ್ಧದ ಟಿ20 ಸರಣಿಯನ್ನು ಬಳಕೆ ಮಾಡಿಕೊಳ್ಳಲು ಆಯ್ಕೆಗಾರರು ಸಿದ್ಧತೆ ನಡೆಸಿದ್ದಾರೆ.

ತಂಡದಲ್ಲಿ ಸ್ಥಾನ ಪಡೆದ ಆಟಗಾರರು

ಮಹೇಂದ್ರ ಸಿಂಗ್ ಧೋನಿ(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶಿಖರ್ ಧವನ್, ಅಜಿಂಕ್ಯಾ ರಹಾನೆ, ಸುರೇಶ್ ರೈನಾ, ಯುವರಾಜ್ ಸಿಂಗ್, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಹರ್ಭಜನ್ ಸಿಂಗ್, ಆಶಿಶ್ ನೆಹ್ರಾ, ಜಸ್ಪೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯಾ, ಪವನ್ ನೇಗಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com