ಎಂಎಸ್ ಧೋನಿ
ಎಂಎಸ್ ಧೋನಿ

ಸದ್ಯಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಇಲ್ಲ: ಧೋನಿ

ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ...
Published on

ನವದೆಹಲಿ: ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿಯಾಗುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

ಮುಂಬರುವ ಟಿ20 ವಿಶ್ವಕಪ್ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ಧೋನಿ ನಿವೃತ್ತಿಯಾಗುವ ಸಾಧ್ಯತೆ ಇತ್ತು. ಅಲ್ಲದೆ ಸದ್ಯಕ್ಕೆ ನಿವೃತ್ತಿಯಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿದ ಧೋನಿ, ಏಷ್ಯಾಕಪ್, ಟಿ20 ವಿಶ್ವಕಪ್ ಬೆನ್ನಲ್ಲೇ ಐಪಿಎಲ್ ಬರಲಿದೆ. ನಂತರದಲ್ಲಿ ಭಾರತ ತಂಡ ಹೆಚ್ಚಿನ ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಈ ನಡುವೆ 5-6 ಏಕದಿನ ಪಂದ್ಯಗಳಲ್ಲಷ್ಟೇ ಕಣಕ್ಕಿಳಿಯಲಿದೆ. ಹೀಗಾಗಿ ಈಗಲೇ ನಿವೃತ್ತಿ ಬಗ್ಗೆ ಚಿಂತಿಸುತ್ತಿಲ್ಲ ಎಂದು ಹೇಳಿದ್ದಾರೆ.

2014ರ ಅಂತ್ಯದಲ್ಲೇ ಧೋನಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿಯಾಗಿದ್ದರು. ಇತ್ತೀಚೆಗೆ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸೋಲಿನಿಂದ ಧೋನಿ ನಾಯಕತ್ವದ ಮೇಲೆ ಒತ್ತಡ ಬಂದಿದ್ದರೂ, ಆಸ್ಟ್ರೇಲಿಯಾ, ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆಲುವಿನಿಂದಾಗಿ ಈ ಬಿಸಿ ಸದ್ಯಕ್ಕೆ ತಣ್ಣಗಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com