ನವದೆಹಲಿ: ಏಷ್ಯಾ ಕಪ್ ಟಿ20 ಟೂರ್ನಿಗಾಗಿ ಬಾಂಗ್ಲಾದೇಶದಲ್ಲಿರುವ ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ ಅಭ್ಯಾಸದ ವೇಳೆ ಗಾಯಗೊಂಡಿದ್ದು, ಗುಜರಾತ್ ನ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಗೆ ತಂಡ ಸೇರುವಂತೆ ಕರೆ ನೀಡಿದ್ದಾರೆ.
ಎಂಎಸ್ ಧೋನಿ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಬೆನ್ನು ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಮೊದಲ ಪಂದ್ಯದಲ್ಲಿ ಧೋನಿ ಆಡುವುದು ಅನುಮಾನ ಹಾಗಾಗಿ, ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಅವರಿಗೆ ತಂಡವನ್ನು ಸೇರಿಕೊಳ್ಳಲು ಸೂಚಿಸಲಾಗಿದೆ.
ಬಿಸಿಸಿಐ ಆಯ್ಕೆದಾರರು ಪಾರ್ಥಿವ್ ಪಟೇಲ್ ಅವರನ್ನು ಆಯ್ಕೆ ಮಾಡಿದ್ದಾರೆ. ಧೋನಿ ಗಾಯದ ಗಂಭೀರತೆ ಅರಿವಾದ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.