
ಕೇಪ್ ಟೌನ್: ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ತಂಡದ ವೇಗಿ ಲೊನ್ವಾಬೊ ಸೊಸೊಬೆ ಸಿಲುಕಿದ್ದಾರೆ.
ದಕ್ಷಿಣ ಆಫ್ರಿಕಾ ಕ್ರಿಕೆಟ್ ನಲ್ಲಿ ದೊಡ್ಡ ಬಿರುಗಾಳಿಯೆಬ್ಬಿಸಿರುವ ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ಸಿಲುಕಿರುವ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್ ಮನ್ ಗುಲಾಮ್ ಬೋಡಿ, ಈಗಾಗಲೇ ತಮ್ಮ ತಪ್ಪನ್ನು ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಕಳೆದ ತಿಂಗಳು ಅವರ ಮೇಲೆ 20 ವರ್ಷಗಳ ನಿಷೇಧ ಹೇರಲಾಗಿದೆ.
ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ಸಂಸ್ಥೆಯು(ಸಿಎಬಿ) ನನ್ನ ಬ್ಯಾಂಕ್ ಖಾತೆ ಹಾಗೂ ಮೊಬೈಲ್ ಕರೆಗಳ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿತ್ತು. ಹಾಗಾಗಿ ಅವುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನಾನು ಸಲ್ಲಿಸಿದ್ದೇನೆ ಎಂದು ಸೊಸೊಬೆ ಹೇಳಿದ್ದಾರೆ.
Advertisement