ವೇಗದ ದ್ವಿಶತಕ: ಸೆಹ್ವಾಗ್ ದಾಖಲೆ ಮುರಿದ ಬೆನ್ ಸ್ಟೋಕ್ಸ್

ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಕೇವಲ 163 ಎಸೆತದಲ್ಲಿ ದ್ವಿಶತಕ ದಾಖಲಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ..
ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ (ಸಂಗ್ರಹ ಚಿತ್ರ)
ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ (ಸಂಗ್ರಹ ಚಿತ್ರ)

ಕೇಪ್​ಟೌನ್: ದಕ್ಷಿಣ ಆಫ್ರಿಕಾ ವಿರುದ್ಧ ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ನ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಕೇವಲ 163 ಎಸೆತದಲ್ಲಿ ದ್ವಿಶತಕ ದಾಖಲಿಸುವ  ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಬೆನ್ ಸ್ಟೋಕ್ಸ್ ಅವರ ಈ ದ್ವಿಶತಕ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವೊಂದರಲ್ಲಿ ಆಟಗಾರನೊಬ್ಬ ಸಿಡಿಸಿದ 2ನೇ ಅತಿವೇಗದ ದ್ವಿಶತಕವಾಗಿದೆ. ಆ ಮೂಲಕ ಬೆನ್ ಸ್ಟೋಕ್ಸ್ ಭಾರತದ ಆಟಗಾರ  ವಿರೇಂದ್ರ ಸೆಹ್ವಾಗ್ ಅವರ ಹೆಸರಲ್ಲಿದ್ದ ದಾಖಲೆಯನ್ನು ಅಳಿಸಿ, ನೂತನ ದಾಖಲೆ ಬರೆದಿದ್ದಾರೆ.

2009ರಲ್ಲಿ ಮುಂಬೈಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ವಿರೇಂದ್ರ ಸೆಹ್ವಾಗ್ ಅವರು 168 ಎಸೆತದಲ್ಲಿ ದ್ವಿಶತಕ ಸಿಡಿಸಿದ್ದರು. 2002ರಲ್ಲಿ ನ್ಯೂಜಿಲೆಂಡ್​ನ ನಥಾನ್ ಆಸ್ಟೆಲ್ ಕ್ರೈಸ್ಟ್  ಚರ್ಚ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 153 ಎಸೆತದಲ್ಲಿ ದ್ವಿಶತಕ ಸಿಡಿಸಿದ್ದರು. ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದಾಖಲಾದ ಅತ್ಯಂತ ವೇಗದ ಶತಕವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com