ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಕರ್ನಾಟಕಕ್ಕೆ ಮತ್ತೆ ನಿರಾಸೆ

ಎದುರಾಳಿ ತಂಡದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿ ಹಾಕಲು ವಿಫಲವಾದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ 20 ಟೂರ್ನಿಯಲ್ಲಿ ಎರಡನೇ ಬಾರಿ ಸೋಲನುಭವಿಸಿತು.
ಸೈಯದ್ ಮುಷ್ತಾಕ್ ಅಲಿ ಟೂರ್ನಿ ಪಂದ್ಯ(ಸಂಗ್ರಹ ಚಿತ್ರ)
ಸೈಯದ್ ಮುಷ್ತಾಕ್ ಅಲಿ ಟೂರ್ನಿ ಪಂದ್ಯ(ಸಂಗ್ರಹ ಚಿತ್ರ)

ಕಟಕ್: ಎದುರಾಳಿ ತಂಡದ ಬ್ಯಾಟಿಂಗ್ ವಿಭಾಗವನ್ನು ಕಟ್ಟಿ ಹಾಕಲು ವಿಫಲವಾದ ಕರ್ನಾಟಕ ತಂಡ ಸೈಯದ್ ಮುಷ್ತಾಕ್ ಅಲಿ ಟಿ 20 ಟೂರ್ನಿಯಲ್ಲಿ ಎರಡನೇ ಬಾರಿ ಸೋಲನುಭವಿಸಿತು. ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಎರಡನೇ ಪಂದ್ಯದಲ್ಲಿ ಸೋಲನುಭವಿಸಿದೆ.
ಟಾಸ್ ಗೆದ್ದ ಕರ್ನಾಟಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಂತರ 20 ಓವರ್ ಗಳಲ್ಲಿ 6 ವಿಕೆಟ್ ಗೆ 160 ರನ್ ದಾಖಲಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಉತ್ತರ ಪ್ರದೇಶ ತಂಡ 19 .1 ಓವರ್ ಗಳಲ್ಲಿ 5 ವಿಕೆಟ್ ಗೆ 161 ರನ್ ಗಳಿಸಿ ಜಯ ಸಾಧಿಸಿತು. ಆ ಮೂಲಕ ಉತ್ತರ ಪ್ರದೇಶ ತಂಡ ಆಡಿದ ಮೂರು ಪಂದ್ಯಗಳಲ್ಲಿ ಜಯ ಸಾಧಿಸುವುದರೊಂದಿಗೆ ಅಗ್ರ 12 ಅಂಕ ಸಂಪಾದಿಸಿ ಗುಂಪಿನಲ್ಲಿ ಅಗ್ರ ಸ್ಥಾನ ಪಡೆದಿದೆ.    
ತಹ ಉತ್ತಮ ಆರಂಭ: ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಕರ್ನಾಟಕ ತಂಡಕ್ಕೆ ಆರಂಭಿಕ ಮೊಹಮದ್ ತಹ(45 ರನ್, 40 ಎಸೆತ, 5 ಬೌಂಡರಿ, 2 ಸಿಕ್ಸರ್) ಉತ್ತಮ ಆರಂಭ ನೀಡಿದರು. ಮತ್ತೊಬ್ಬ ಆರಂಭಿಕ ಮಯಾಂಕ್ ಅಗರ್ ವಾಲ್ 20, ರಾಬಿನ್ ಉತ್ತಪ್ಪ 25 ರನ್ ಗಳಿಸಿದರು. ಈ ಇಬ್ಬರು ಆಟಗಾರರು ಉತ್ತಮ ಆರಂಭ ಸಿಕ್ಕ ನಂತರ ವಿಕೆಟ್ ಒಪ್ಪಿಸಿದ್ದು ತಂಡಕ್ಕೆ ದುಬಾರಿಯಾಗಿ ಪರಿಣಮಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com