

ಅನಂತಪುರಂ(ಆಂಧ್ರ): ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪದಡಿಯಲ್ಲಿ ಟೀಂ ಇಂಡಿಯಾದ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅನಂತಪುರಂ ಜೆಎಂಎಫ್ ಸಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಇಂದು ಪ್ರಕರಣದ ವಿಚಾರಣೆ ನಡೆಸಿದ ಅನಂತಪುರಂ ಕೋರ್ಟ್, ಮಹೇಂದ್ರ ಸಿಂಗ್ ಧೋನಿ ಫೆಬ್ರುವರಿ 25ರಂದು ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿದೆ.
2013ರ ಏಪ್ರಿಲ್ 24ರಂದು ನಿಯತಕಾಲಿಕವೊಂದರಲ್ಲಿ ಮಹೇಂದ್ರ ಸಿಂಗ್ ಧೋನಿ ವಿಷ್ಣುವಿನ ಅವತಾರದಲ್ಲಿ ಶೂಗಳನ್ನು ಹಿಡಿದ ಚಿತ್ರವನ್ನು ಪ್ರಕಟಿಸಿತ್ತು. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ನ ಶ್ಯಾಮ್ ಸುಂದರ್ ಎಂಬವರು ಧೋನಿ ವಿರುದ್ಧ ದೂರು ದಾಖಲಿಸಿದ್ದರು.