ಶಮಿ ಅವರು ಎಡ ಮಂಡಿ ನೋವಿನಿಂದ ಬಳಲುತ್ತಿರುವ ಕಾರಣ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಪಂದ್ಯ ಮತ್ತು ಅದರ ನಂತರ ನಡೆಯಲಿರುವ ಟಿ 20 ಪಂದ್ಯಗಳಿಗೆ ಅಲಭ್ಯವಾಗಲಿದ್ದಾರೆ. ಅಷ್ಟೇ ಅಲ್ಲದೆ ನಾಲ್ಕರಿಂದ 6 ವಾರಗಳ ವರೆಗೆ ಅವರಿಗೆ ವಿಶ್ರಾಂತಿ ನೀಡಿದ್ದು, ಅವರು ಯಾವುದೇ ಕ್ರಿಕೆಟ್ ಪಂದ್ಯಗಳಲ್ಲಿ ಭಾಗಿಯಾಗುವುದಿಲ್ಲ. ಶಮಿ ಬದಲು ಭುವನೇಶ್ವರ್ ಕುಮಾರ್ ಅವರನ್ನು ತಂಡದಲ್ಲಿ ಸೇರಿಸಲಾಗಿದೆ ಎಂದು ಬಿಸಿಸಿಐ ಹೇಳಿಕೆ ನೀಡಿದೆ.