ಸ್ವಹಿತಾಸಕ್ತಿ ಸಂಘರ್ಷದಲ್ಲಿ ಸೌರವ್ ಗಂಗೂಲಿ

ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಹಾಗೂ ಅದರ ಅಧೀನ ಸಂಸ್ಥೆಗಳಲ್ಲಿ ಮಹ ತ್ವದ ಹುದ್ದೆಗಳನ್ನು ಹೊಂದಿರುವ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬಗ್ಗೆ ತನಿಖೆ ನಡೆ...
ಸೌರವ್ ಗಂಗೂಲಿ
ಸೌರವ್ ಗಂಗೂಲಿ

ಮುಂಬೈ: ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಹಾಗೂ ಅದರ ಅಧೀನ ಸಂಸ್ಥೆಗಳಲ್ಲಿ ಮಹತ್ವದ ಹುದ್ದೆಗಳನ್ನು ಹೊಂದಿರುವ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬಗ್ಗೆ ತನಿಖೆ ನಡೆಸಲು ಬಿಸಿಸಿಐ ಓಂಬುಡ್ಸ್ಮನ್ ನಿವೃತ್ತ ನ್ಯಾಯಮೂರ್ತಿ ಎ.ಪಿ. ಷಾ ಆಗ್ರಹಿಸಿದ್ದಾರೆ.

ಈ ಬಗ್ಗೆ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋ ಹರ್, ಐಪಿಎಲ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರತ್ನಾಕರ್ ಶೆಟ್ಟಿಯವರಿಗೆ ಪತ್ರ ಬರೆದಿರುವ ಷಾ, ತನಿಖಾ ವರದಿಯನ್ನು ಜ. 27ರೊಳಗೆ ಸಲ್ಲಿಸಲು ಸೂಚಿಸಿದ್ದಾರೆ. ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿರುವ ಗಂಗೂಲಿ, ಐಪಿಎಲ್ ಆಡಳಿತ ಮಂಡಳಿಯ ಸದಸ್ಯರೂ ಆಗಿದ್ದು, ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯ ಫಾ್ರಂಚೈಸಿ ಯಾದ ಅಟ್ಲೆಟಿಕೊ ಡಿ ಕೋಲ್ಕತಾದ ಸಹ ಮಾಲೀಕ ಕೂಡ. ಹೀಗಾಗಿ, ಸೂಕ್ತ ವಿವರಣೆ ನೀಡಬೇಕೆಂದು ನ್ಯಾ. ಷಾ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಬಿಸಿಸಿಐ ಸುಧಾರಣೆಗಾಗಿ ನಿವೃತ್ತ ನ್ಯಾ. ಆರ್. ಎಂ. ಲೋಧಾ ಇತ್ತೀಚೆಗಷ್ಟೇ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಹಿತಾಸಕ್ತಿ ಸಂಘರ್ಷದ ಕುರಿತೂ ಗಂಭೀರ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com