

ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 3 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿದ್ದು, ಆಸ್ಟ್ರೇಲಿಯಾಗೆ 185 ರನ್ ಗಳ ಟಾರ್ಗೆಟ್ ನೀಡಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ 60, ಶಿಖರ್ ಧವನ್ 42, ಎಂಎಸ್ ಧೋನಿ 14 ರನ್ ಗಳಿಸಿ ಔಟಾದರೆ, ವಿರಾಟ್ ಕೊಹ್ಲಿ ಅಜೇಯ 59 ರನ್ ಹಾಗೂ ಸುರೇಶ್ ರೈನಾ ಅಜೇಯ 0 ಗಳಿಸಿದ್ದಾರೆ.
ಆಸ್ಟ್ರೇಲಿಯಾ ಪರ ಟೈ ಮತ್ತು ಮ್ಯಾಕ್ಸ್ ವೆಲ್ ತಲಾ 1 ವಿಕೆಟ್ ಪಡೆದಿದ್ದಾರೆ.