ಬಾಂಗ್ಲಾ-ಟೀಂ ಇಂಡಿಯಾ ಹೈ ವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿ

ಮೀರ್ಪುರದಲ್ಲಿ ಟಿ20 ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದೆ...
ಮಳೆ
ಮಳೆ

ಮೀರ್ಪುರ: ಮೀರ್ಪುರದಲ್ಲಿ ಟಿ20 ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದೆ.

ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ಹೈ ವೋಲ್ಟೇಜ್ ಫೈನಲ್ ಪಂದ್ಯ ಸಂಜೆ 7 ಗಂಟೆಗೆ ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆಯಬೇಕಿತ್ತು. ಆದರೆ ಎಡಬಿಡದೆ ಮಳೆ ಸುರಿಯುತ್ತಿದ್ದು, ಪಂದ್ಯ ತಡವಾಗಿ ಆರಂಭಗೊಳ್ಳಲಿದೆ.

ಸ್ಟೇಡಿಯಂನಲ್ಲಿ ಉಭಯ ತಂಡಗಳು ಅಭ್ಯಾಸ ಮಾಡುತ್ತಿದ್ದ ವೇಳೆ ಮಳೆ ಬೀಳಲು ಶುರುವಾಗಿದ್ದು, ಆಟಗಾರರೆಲ್ಲಾ ಡ್ರೇಸಿಂಗ್ ರೂಮ್ ಗೆ ತೆರಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com