
ನವದೆಹಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನ 9ನೇ ಆವೃತ್ತಿಯಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಭಾರತದ ವೇಗಿ ಜಹೀರ್ ಖಾನ್ ನಾಯಕನಾಗಿ ಆಯ್ಕೆಯಾಗಿದ್ದು, ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಆಡಳಿತ ಮಂಡಳಿ ಈ ವಿಷಯವನ್ನು ಖಚಿತಪಡಿಸಿದೆ.
2015ರಲ್ಲಿ ಜಹೀರ್ ಖಾನ್ ಡೆಲ್ಲಿ ತಂಡದ ಸದಸ್ಯರಾಗಿದ್ದರು. ಜೀನ್‌ಪಾಲ್ ಡ್ಯುಮಿನಿ ಆಗ ಡೆಲ್ಲಿ ತಂಡವನ್ನು ಮುನ್ನಡೆಸಿದ್ದರು. ಈ ಬಾರಿ ಡ್ಯುಮಿನಿ ತಂಡದ ಸದಸ್ಯರಾಗಿ ಮಾತ್ರ ಇರಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.
ಜಹೀರ್ ಖಾನ್ಗೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ ಬೆಂಗಳೂರು ಪರ ಆಡಿದ ಅನುಭವ ಹೊಂದಿದ್ದಾರೆ.
ಡೆಲ್ಲಿ ತಂಡಕ್ಕೆ ಸಲಹೆಗಾರರಾಗಿ ರಾಹುಲ್ ದ್ರಾವಿಡ್ ಸೇರಿಕೊಂಡಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಜತೆಗೆ ದ್ರಾವಿಡ್ ತಂಡದೊಳಗೆ ಕೆಲವೊಂದು ಮಹತ್ವದ ಬದಲಾವಣೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
Advertisement