ವಿಶಾಖಪಟ್ಟಣಂ: ಟೀ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಅವರು ಕ್ರಿಕೆಟ್ ಲೋಕದ ದೇವರು ಎಂದೆನಿಸಿಕೊಂಡಿರುವ ಸಚಿನ್ ತೆಂಡೂಲ್ಕರ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಅಭಿಮಾನಿಗಳಲ್ಲಿ ಒಬ್ಬರಾಗಿರುವ ಯುವರಾಜ್ ಸಿಂಗ್ ಅವರು ನಿನ್ನೆ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದ್ರಾಬಾದ್ ತಂಡದ ನಡುವೆ ನಡೆದ ಪಂದ್ಯದ ನಂತರ ಸಚಿನ್ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.
ಮುಂಬೈ ತಂಡ ಮೇಲ್ವಚಾರಕರಾಗಿರುವ ಸಚಿನ್ ಮೈದಾನದೊಳಗೆ ಕಾಲಿಡುತ್ತಿದ್ದಂತೆಯೇ ಯುವಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ತದ ನಂತರ ಸಚಿನ್ ಗೆ ಹಸ್ತಲಾಘವ ಮಾಡಿ ಕೆಲ ಸಮಯ ಮಾತನಾಡಿದ್ದಾರೆ.