

ಅಹಮದಾಬಾದ್: ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ತಂಡವನ್ನು ಅನೂಪ್ ನೇತೃತ್ವದ ತಂಡ ಮಣಿಸಿ ಟೂರ್ನಿಯಲ್ಲಿ ಸತತ ಎರಡನೇ ಜಯ ಗಳಿಸಿದೆ.
ಟ್ರಾನ್ಸ್ ಸ್ಟೇಡಿಯಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಭಾರತ 57-20 ಅಂಕಗಳಿಂದ ಬಾಂಗ್ಲಾದೇಶ ತಂಡವನ್ನು ಮಣಿಸಿತು. ಇದರೊಂದಿಗೆ ಎ ಗುಂಪಿ ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ.
ಭಾರತ ಪರ ಅಜಯ್ ಠಾಕೂರ್ 11 ಅಂಕ, ಪ್ರದೀಪ್ ನರ್ವಾಲ್ 8 ಅಂಕಗಳನ್ನು ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
Advertisement