ರಿಯೋ ಒಲಂಪಿಕ್ಸ್ ಪದಕ: 4 ನೇ ಸ್ಥಾನಕ್ಕೆ ಏರಿದ ಸಾಕ್ಷಿ ಮಲಿಕ್

ರಿಯೋ ಒಲಿಂಪಿಕ್ಸ್‌‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿರುವ ಕುಸ್ತಿಪಟು ಸಾಕ್ಷಿ ಮಲಿಕ್‌ ಯುನೈಟೆಡ್‌ ವರ್ಲ್ಡ್‌ ರೆಸ್ಲಿಂಗ್‌‌ನ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ...
ಸಾಕ್ಷಿ ಮಲಿಕ್
ಸಾಕ್ಷಿ ಮಲಿಕ್

ನವದೆಹಲಿ: ರಿಯೋ ಒಲಿಂಪಿಕ್ಸ್‌‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿರುವ ಕುಸ್ತಿಪಟು ಸಾಕ್ಷಿ ಮಲಿಕ್‌ ಯುನೈಟೆಡ್‌ ವರ್ಲ್ಡ್‌ ರೆಸ್ಲಿಂಗ್‌‌ನ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.

ರಿಯೋ ಒಲಿಂಪಿಕ್ಸ್‌‌ನಲ್ಲಿ 58ಕೆಜಿ ತೂಕ ವಿಭಾಗದ ಕುಸ್ತಿಯಲ್ಲಿ ಸಾಕ್ಷಿ ಮಲಿಕ್‌‌ ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿರುವ ಮಹಿಳೆ ಎಂಬ ಖ್ಯಾತಿಗೆ ಸಾಕ್ಷಿ ಮಲಿಕ್‌ ಪಾತ್ರರಾಗಿದ್ದಾರೆ.

ಉಳಿದಂತೆ ರಿಯೋದಲ್ಲಿ ಭಾಗಿಯಾಗಿದ್ದ ಮತ್ತೊರ್ವ ಮಹಿಳಾ ಕುಸ್ತಿಪಟು ವಿನೇಶ್‌ ಫೊಗತ್‌ ಎರಡು ಸ್ಥಾನ ಏರಿಕೆ ಕಂಡು 11ನೇ ಸ್ಥಾನ ಏರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com