ಮೊದಲ ಇಂಡಿಯಾ ಓಪನ್ ಟೈಟಲ್ ಗೆದ್ದ ಪಿವಿ ಸಿಂಧು

ಇಂಡಿಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಎದುರಾಳಿ ಸ್ಪೈನ್...
ಪಿ.ವಿ.ಸಿಂಧು
ಪಿ.ವಿ.ಸಿಂಧು
Updated on
ನವದೆಹಲಿ: ಇಂಡಿಯಾ ಓಪನ್ ಸೂಪರ್ ಸಿರೀಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿವಿ ಸಿಂಧು ಎದುರಾಳಿ ಸ್ಪೈನ್ ನ ಕರೋಲಿನ್ ಮರಿನ್ ವಿರುದ್ಧ ಭರ್ಜರಿ ಜಯ ಗಳಿಸಿ ಟ್ರೋಫಿಗೆ ಮುತ್ತಿಕ್ಕಿದ್ದಾರೆ. 
ಇಂದು ನಡೆದ ಮಹಿಳೆಯ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಕ್ಯಾರೊಲಿನ್ ಮರಿನ್ ವಿರುದ್ಧ 21-19, 21-16 ನೇರ ಸೆಟ್ ಗಳಿಂದ ಮಣಿಸಿ ಜಯ ಗಳಿಸಿದ್ದಾರೆ. ಇದರೊಂದಿಗೆ ಪಿವಿ ಸಿಂಧು ಮೊದಲ ಇಂಡಿಯಾ ಓಪನ್ ಟೈಟಲ್ ಗೆ ಮುತ್ತಿಟ್ಟರು.
ನಿನ್ನೆ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ದಕ್ಷಿಣ ಕೊರಿಯಾದ ಸಂಗ್ ಜಿ ಹ್ಯೂನ್ ವಿರುದ್ಧ 21-18, 14-21, 21 -14 ನೇರ ಸೆಟ್ ಗಳ ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com