ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾಕಿ ವಿಶ್ವ ಲೀಗ್: ಜರ್ಮನಿ ಮಣಿಸಿದ ಭಾರತಕ್ಕೆ ಕಂಚಿನ ಪದಕ

ಭಾರತದಲ್ಲಿ ನಡೆಯುತ್ತಿರುವ ವಿಶ್ವ ಹಾಕಿ ಲೀಗ್ ಸರಣಿಯ 3ನೇ ಸ್ಥಾನಕ್ಕಾಗಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕ ಬಾಚಿಕೊಂಡಿದೆ.
Published on
ಭುವನೇಶ್ವರ: ಭಾರತದಲ್ಲಿ ನಡೆಯುತ್ತಿರುವ ವಿಶ್ವ ಹಾಕಿ ಲೀಗ್ ಸರಣಿಯ 3ನೇ ಸ್ಥಾನಕ್ಕಾಗಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಜರ್ಮನಿ ತಂಡವನ್ನು ಮಣಿಸಿ ಕಂಚಿನ ಪದಕ ಬಾಚಿಕೊಂಡಿದೆ.
ಒಡಿಶಾದ ಭುವನೇಶ್ವರದಲ್ಲಿ ನಡೆದ ಪಂದ್ಯದಲ್ಲಿ ಪ್ರಬಲ ಜರ್ಮನಿ ತಂಡವನ್ನು 2-1 ಗೋಲುಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ತಂಡ ಈ ಸಾಧನೆ ಗೈದಿದೆ. ಮೂರು ಮತ್ತು ನಾಲ್ಕನೇ ಸ್ಥಾನವನ್ನು ನಿರ್ಣಯಿಸಲು ನಡೆದ  ಈ ಪಂದ್ಯದಲ್ಲಿ ಅಪ್ರತಿಮ ಹೋರಾಟ ತೋರಿದ ಭಾರತ ತಂಡ ಜರ್ಮನಿ ತಂಡವನ್ನು 2-1 ಅಂತರದಲ್ಲಿ ಮಣಿಸಿತು. ಆ ಮೂಲಕ ಟೂರ್ನಿಯನ್ನು ಕಂಚಿನ ಪದಕ ಗೆಲ್ಲುವ ಮೂಲಕ ಯಶಸ್ವಿಯಾಗಿ ಪೂರ್ಣಗೊಳಿಸಿತು.
ಈ ಹಿಂದೆ 2015ರಲ್ಲಿ ನಡೆದ ಹಾಕಿ ವಿಶ್ವ ಲೀಗ್ ನಲ್ಲೂ ಭಾರತ ತಂಡ ಮೂರನೇ ಸ್ಥಾನ ಗಳಿಸಿತ್ತು. ಅಂದು ಕೂಡ ಇದೇ ಜರ್ಮನಿ ತಂಡವನ್ನು 2-0 ಅಂತರದಲ್ಲಿ ಮಣಿಸಿ ಪ್ರಬಲ ಜರ್ಮನಿಗೆ ನಿರಾಸೆಯುಂಟು ಮಾಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com