ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ: ಯೋಧನ ಬೆಂಬಲಕ್ಕೆ ನಿಂತ ಕ್ರೀಡಾಪಟುಗಳು

ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ಕಳಪೆ ಗುಣಮಟ್ಟ ಆಹಾರವನ್ನು ನೀಡುತ್ತಿದ್ದಾರೆಂದು ಆರೋಪಿಸಿದ್ದ ಯೋಧ ತೇಜ್ ಬಹದ್ದೂರ್ ಅವರ ಬೆಂಬಲಕ್ಕೆ ಇದೀಗ ಕ್ರೀಡಾಪಟುಗಳು...
ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ: ಯೋಧನ ಬೆಂಬಲಕ್ಕೆ ನಿಂತ ಕ್ರೀಡಾಪಟುಗಳು
ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ: ಯೋಧನ ಬೆಂಬಲಕ್ಕೆ ನಿಂತ ಕ್ರೀಡಾಪಟುಗಳು

ನವದೆಹಲಿ: ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟು ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ಕಳಪೆ ಗುಣಮಟ್ಟ ಆಹಾರವನ್ನು ನೀಡುತ್ತಿದ್ದಾರೆಂದು ಆರೋಪಿಸಿದ್ದ ಯೋಧ ತೇಜ್ ಬಹದ್ದೂರ್ ಅವರ ಬೆಂಬಲಕ್ಕೆ ಇದೀಗ ಕ್ರೀಡಾಪಟುಗಳು ಧಾವಿಸಿದ್ದಾರೆ.

ಗಡಿ ಕಾಯುವ ಯೋಧರಿಗೆ ಅಧಿಕಾರಿಗಳು ನೀಡುತ್ತಿರುವ ಕಳಪೆ ಗುಣಮಟ್ಟದ ಆಹಾರ ಕುರಿತಂತೆ ನಿನ್ನೆಯಷ್ಟೇ ಬಿಎಸ್ ಎಫ್ ಯೋಧರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಾಕಿ, ತಾವು ಎದುರಿಸುತ್ತಿರುವ ಪರಿಸ್ಥಿತಿಯನ್ನು ಹೇಳಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಅಧಿಕಾರಿಗಳ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗತೊಡಗಿವೆ.

ಇದರ ನಡುವೆಯ ಆರೋಪ ಮಾಡಿದ್ದ ಯೋಧ ತೇಜ್ ಬಹದ್ದೂರ್ ಅವರು ಅಧಿಕಾರಿಗಳ ವಿರುದ್ಧ ಮತ್ತೊಂದು ಆರೋಪ ಮಾಡಿದ್ದು, ತನ್ನ ವಿರುದ್ಧ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಂಡಿದ್ದು, ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆಂದು ಹೇಳಿಕೊಂಡಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಇದೀಗ ಯೋಧ ತೇಜ್ ಬಹದ್ದೂರ್ ಅವರ ಬೆಂಬಲಕ್ಕೆ ಕ್ರೀಡಾಪಡುಗಳು ಬಂದಿದ್ದಾರೆ. ಯೋಧನ ವಿಡಿಯೋ ಕುರಿತಂತೆ ಟ್ವಿಟರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕ್ರೀಡಾಪಟುಗಳು, ಯೋಧರಿಗೆ ಸೂಕ್ತ ರೀತಿಯ ಸೌಲಭ್ಯ ಹಾಗೂ ಯೋಧರ ಕ್ಷೇಮ ಕಾಪಾಡುವಂತೆ ಆಗ್ರಹಿಸಿದ್ದಾರೆ.

ಯಾರು ಏನನ್ನೇ ಹೇಳಿರಲಿ ಮತ್ತು ಮಾಡಿರಲಿ ನಮ್ಮ ಯೋಧರು ಹಾಗೂ ರೈತರ ಕ್ಷೇಮವನ್ನು ಉತ್ತಮ ರೀತಿಯಲ್ಲಿ ನೋಡಿಕೊಳ್ಳಬೇಕು. ಯೋಧರಿಗೆ ಸರಿಯಾದ ರೀತಿಯಲ್ಲಿ ಆಹಾಹ ನೀಡಬೇಕು...#Food4Soldiers ಎಂದು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com