ಏಷ್ಯಾ ಮಹಿಳಾ ಬಾಸ್ಕೆಟ್‌ಬಾಲ್: ಭಾರತ ಚಾಂಪಿಯನ್

ಏಷ್ಯಾ ಮಹಿಳಾ ಬಾಸ್ಕೆಟ್ ಬಾಲ್ ಪಂದ್ಯಾವಳಿಯ ಬಿ ಡಿವಿಷನ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಕಜಕಸ್ತಾನ್ ವಿರುದ್ಧ ರೋಚಕ ಗೆಲುವು ಸಾಧಿಸಿ ಏಷ್ಯಾ ಬಾಸ್ಕೆಟ್...
ಭಾರತ ಮಹಿಳಾ ತಂಡ
ಭಾರತ ಮಹಿಳಾ ತಂಡ
ಬೆಂಗಳೂರು: ಏಷ್ಯಾ ಮಹಿಳಾ ಬಾಸ್ಕೆಟ್ ಬಾಲ್ ಪಂದ್ಯಾವಳಿಯ ಬಿ ಡಿವಿಷನ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಕಜಕಸ್ತಾನ್ ವಿರುದ್ಧ ರೋಚಕ ಗೆಲುವು ಸಾಧಿಸಿ ಏಷ್ಯಾ ಬಾಸ್ಕೆಟ್ ಬಾಲ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. 
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಅಂತಿಮ ಕ್ಷಣದಲ್ಲಿ ಸ್ಟಾರ್ ಆಟಗಾರ್ತಿ ಶಿರಿನ್ ಲಿಮಯೆ(17 ಅಂಕ) ದಾಖಲಿಸಿ ಅದ್ಭುತ ಪ್ರದರ್ಶನ ನೀಡಿದರು. ಈ ಮೂಲಕ ಭಾರತ ತಂಡ 75-73 ಅಂಕಗಳಿಂದ ಕಜಕಸ್ತಾನ ಎದುರು ಜಯ ಸಾಧಿಸಿತು. ಈ ಮೂಲಕ ಆತಿಥೇಯ ಭಾರತ ತಂಡ 2019ರಲ್ಲಿ ನಡೆಯಲಿರುವ ಏಷ್ಯಾ ಮಹಿಳಾ ಬಾಸ್ಕೆಟ್ ಬಾಲ್ ಟೂರ್ನಿಯಲ್ಲಿ ಎ ಡಿವಿಷನ್ ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. 
ಇನ್ನು ಹಾಲಿ ಚಾಂಪಿಯನ್ ಜಪಾನ್ ತಂಡ ಎ ಡಿವಿಷನ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 74-73 ಅಂಕಗಳಿಂದ ಜಯ ಪಡೆಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com