ಪ್ಯಾರಿಸ್: ಫ್ರೆಂಚ್ ಓಪನ್ ಟೆನಿಸ್ ಪಂದ್ಯಾವಳಿಯ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ಕೆನಡಾದ ಗೇಬ್ರಿಯೆಲಾ ದಬ್ರೋವ್‌ಸ್ಕಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಲಿಯಾಂಡರ್ ಫೇಸ್, ಮಹೇಶ್ ಭೂಪತಿ, ಸಾನಿಯಾ ಮಿರ್ಜಾ ಬಳಿಕ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಟೆನಿಸ್ ಪಟು ಎಂಬ ಗೌರವಕ್ಕೆ ಬೋಪಣ್ಣ ಪಾತ್ರರಾಗಿದ್ದಾರೆ.