ಫೋರ್ಬ್ಸ್ ಟಾಪ್ 100 ಕ್ರೀಡಾಪಟುಗಳ ಪಟ್ಟಿಯಲ್ಲಿ ಏಕೈಕ ಭಾರತೀಯ ವಿರಾಟ್ ಕೊಹ್ಲಿ

ಜಗತ್ತಿನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿರುವ ಟಾಪ್ 100 ಕ್ರೀಡಾಪಟುಗಳ ಪಟ್ಟಿಯನ್ನು ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಬಿಡುಗಡೆ ಮಾಡಿದ್ದು...
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ
ನ್ಯೂಯಾರ್ಕ್: ಜಗತ್ತಿನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿರುವ ಟಾಪ್ 100 ಕ್ರೀಡಾಪಟುಗಳ ಪಟ್ಟಿಯನ್ನು ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಬಿಡುಗಡೆ ಮಾಡಿದ್ದು ಪಟ್ಟಿಯಲ್ಲಿ ಸ್ಥಾನ ಪಡೆಯುವ ಮೂಲಕ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭಾರತದ ಏಕೈಕ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 
ಟಾಪ್ 100 ಕ್ರೀಡಾಪಟುಗಳ ಪಟ್ಟಿಯಲ್ಲಿ ಪೋರ್ಚುಗೀಸ್ ನ ಫುಟ್ಬಾಲ್ ಆಟಗಾರ ಕ್ರಿಶ್ಚಿಯಾನೋ ರೊನಾಲ್ಡೊ ಅಗ್ರಸ್ಥಾನ ಪಡೆದಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಪಟ್ಟಿಯಲ್ಲಿ 89ನೇ ಸ್ಥಾನ ಪಡೆದಿದ್ದಾರೆ. ಕೊಹ್ಲಿ ಒಟ್ಟು ಕಳೆದ ವರ್ಷ 22 ಮಿಲಿಯನ್ ಅಮೆರಿಕನ್ ಡಾಲರ್ ಹಣ ಸಂಭಾವನೆ ರೂಪದಲ್ಲಿ ಪಡೆದುಕೊಂಡಿದ್ದಾರೆ. 
ರೊನಾಲ್ಡೊ ಒಟ್ಟಾರೆ 93 ಮಿಲಿಯನ್ ಅಮೆರಿಕನ್ ಡಾಲರ್ ಹಣ ಸಂಪಾದನೆ ಮಾಡಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿರುವ ಅಮೆರಿಕನ್ ಬಾಸ್ಕೆಟ್ ಬಾಲ್ ಸ್ಟಾರ್ ಆಟಗಾರ ಲೆಬ್ರೋನ್ ಜೇಮ್ಸ್ ಒಟ್ಟು 86.2 ಮಿಲಿಯನ್ ಡಾಲರ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ 21 ಮಿಲಿಯನ್ ಅಮೆರಿಕನ್ ಡಾಲರ್ ಸಂಭಾವನೆ ಹೊಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com