ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಚಾಂಪಿಯನ್

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಕಿದಂಬಿ ಶ್ರೀಕಾಂತ್
ಕಿದಂಬಿ ಶ್ರೀಕಾಂತ್
Updated on
ಸಿಡ್ನಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ ಕಿದಂಬಿ ಶ್ರೀಕಾಂತ್ ಆಸ್ಟ್ರೇಲಿಯಾ ಓಪನ್ ಸೂಪರ್ ಸೀರಿಸ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. 
ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಒಲಿಂಪಿಕ್ಸ್ ಚಾಂಪಿಯನ್ ಆಗಿದ್ದ ಚೀನಾದ ಚೆನ್ ಲಾಂಗ್ ರನ್ನು ಶ್ರೀಕಾಂತ್ 22-20, 21-16 ನೇರ ಸೆಟ್ ಗಳಿಂದ ಮಣಿಸುವ ಮೂಲಕ ಸತತ ಎರಡನೇ ಸೂಪರ್ ಸೀರಿಸ್ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. 
ಕಿದಂಬಿ ಶ್ರೀಕಾಂತ್ ಇತ್ತೀಚೆಗಷ್ಟೇ ಇಂಡೊನೇಷ್ಯಾ ಓಪನ್ ಸೂಪರ್ ಸೀರಿಸ್ ನ ಸಿಂಗಲ್ ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com