ನವದೆಹಲಿ: ಲಂಡನ್ ಒಲಂಪಿಕ್ಸ್ ಕಂಚಿನ ಪದಕ ವಿಜೇತ ಗಗನ್ ನಾರಂಗ್ ಆಸ್ಟ್ರೇಲಿಯಾದ ಬ್ರಿಸ್ಬೇನ್ ನಲ್ಲಿನ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಶೂಟಿಂಗ್ ಚಾಂಪಿಯನ್ ಶಿಪ್ ನ 50 ಮೀಟರ್ ರೈಫಲ್ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಅದೇ ಪಂದ್ಯದಲ್ಲಿ ಇನ್ನೋರ್ವ ಯುವಕ ಆಟಗಾರ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಜಯಿಸಿದ್ದಾರೆ.