ಪುರುಷರ ಬಳಿಕ ಏಷ್ಯಾ ಕಪ್ ಹಾಕಿ ಚಾಂಪಿಯನ್ ಪಟ್ಟ ಅಲಂಕರಿಸಿದ ಮಹಿಳಾ ತಂಡ

ಏಷ್ಯಾ ಕಪ್ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ಹಾಕಿ ತಂಡ ಚೀನಾವನ್ನು ಮಣಿಸಿ ಏಷ್ಯಾ ಕಪ್ ಹಾಕಿ ಚಾಂಪಿಯನ್ ಪಟ್ಟ ಅಲಂಕರಿಸಿದೆ...
ಭಾರತ
ಭಾರತ
ಏಷ್ಯಾ ಕಪ್ ಹಾಕಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ಮಹಿಳಾ ಹಾಕಿ ತಂಡ ಚೀನಾವನ್ನು ಮಣಿಸಿ ಏಷ್ಯಾ ಕಪ್ ಹಾಕಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. 
ಜಪಾನ್ ನ ಕಾಕಮಿಗಾರದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಚೀನಾವನ್ನು 5-4 ಗೋಲುಗಳಿಂದ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತು. 
ನಿಗದಿತ ಸಮಯದಲ್ಲಿ ಉಭಯ ತಂಡಗಳು 1-1 ಗೋಲುಗಳಿಂದ ಸಮಬಲ ಸಾಧಿಸಿದ್ದವು. ಈ ಹಿನ್ನೆಲೆಯಲ್ಲಿ ಉಭಯ ತಂಡಗಳಿಗೂ 5 ಶೂಟ್ ಔಟ್ ಗೋಲುಗಳನ್ನು ನೀಡಲಾಯಿತು. ಈ ಶೂಟ್ ಔಟ್ ನಲ್ಲಿ ಭಾರತ 5 ಗೋಲುಗಳನ್ನು ಸಿಡಿಸಿತು. 
ಏಷ್ಯಾ ಕಪ್ ಹಾಕಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಅಂತಾರಾಷ್ಟ್ರೀಯ ಹಾಕಿ ಒಕ್ಕೂಟ(ಎಫ್ಐಎಚ್) 2018ರ ವಿಶ್ವಕಪ್ ಗೆ ಎಂಟ್ರಿ ಪಡೆದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com